ತಗಚಗೆರೆ ಗ್ರಾಪಂ ಎದುರು ಗ್ರಾಮಸ್ಥರ ಪ್ರತಿಭಟನೆಚನ್ನಪಟ್ಟಣ: ಗ್ರಾಮದಲ್ಲಿ ಚರಂಡಿಗಳ ಸ್ವಚ್ಛತೆ, ನೀರಿನ ವ್ಯವಸ್ಥೆ, ಬೀದಿ ದೀಪಗಳ ನಿರ್ವಹಣೆ ಸಮಪರ್ಕವಾಗಿಲ್ಲ. ದನದ ಕೊಟ್ಟಿಗೆ ನಿರ್ಮಿಸಿಕೊಳ್ಳಲು ರೈತರಿಗೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸುತ್ತಿಲ್ಲ, ಪ್ರವರ್ಗ ೧ರಲ್ಲಿ ಅನುದಾನವನ್ನು ಬೇಕಾಬಿಟ್ಟಿ ಬಳಸಿಕೊಳ್ಳುತ್ತಿದ್ದು, ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ತಮಗಿಷ್ಟ ಬಂದಂತೆ ವರ್ತಿಸುತ್ತಿದ್ದಾರೆ ಎಂದು ಕೆಲ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಆರೋಪಿಸಿದರು.