ಬಿರುಗಾಳಿ ಮಳೆಗೆ ಧರೆಗುರುಳಿದ ಬಾಳೆಗಿಡಗಳುಚನ್ನಪಟ್ಟಣ: ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಸುಮಾರು ೨ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ಮುರಿದುಬಿದ್ದಿದ್ದು, ರೈತನಿಗೆ ಲಕ್ಷಾಂತರ ರುಪಾಯಿ ನಷ್ಟ ಉಂಟಾಗಿರುವ ಘಟನೆ ತಾಲೂಕಿನ ಗರಕಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೃಷ್ಣೇಗೌಡ ತಮ್ಮ ತೋಟದಲ್ಲಿ ಬೆಳೆದಿದ್ದ ಬಾಳೆಗಿಡ ಬೆಳೆದಿದ್ದರು. ಶುಕ್ರವಾರ ಸುರಿದ ಮಳೆ ಹಾಗೂ ಬಿರುಗಾಳಿಗೆ ಗಿಡಗಳೆಲ್ಲಾ ಮುರಿದು ನಷ್ಟವುಂಟಾಗಿದೆ.