ಸರ್ಕಾರಿ ಕಚೇರಿಗಳಲ್ಲಿ ರೈತರ ನಿರ್ಲಕ್ಷ್ಯಕ್ಕೆ ಖಂಡನೆಚನ್ನಪಟ್ಟಣ: ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳಿಗೆ ಹೋಗುವ ರೈತರನ್ನು ನಿರ್ಲಕ್ಷಿಸುವುದಲ್ಲದೆ, ಅಧಿಕಾರಿಗಳು ಅಸಡ್ಡೆಯಿಂದ ನೋಡುತ್ತಿದ್ದು, ತಪ್ಪು ಮಾಹಿತಿ ನೀಡಿ ಕಚೇರಿಯಿಂದ ಕಚೇರಿಗೆ ಅಲೆದಾಡಿಸುತ್ತಿದ್ದಾರೆ. ರೈತರ ಮೇಲೆ ಅಧಿಕಾರಿಗಳ ತಾತ್ಸಾರ ಮನೋಭಾವ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.