ಟಿಎಪಿಸಿಎಂಎಸ್ ಚುನಾವಣೆಗೆ ಕಾಂಗ್ರೆಸ್ ಬಹಿಷ್ಕಾರಚನ್ನಪಟ್ಟಣ: ಚನ್ನಪಟ್ಟಣ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದಲ್ಲಿ ತಮಗೆ ಬೇಕಾದವರಿಗೆ ಮತದಾನದ ಹಕ್ಕು ನೀಡಿ ವಾಮಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಜೆಡಿಎಸ್ ಹುನ್ನಾರ ನಡೆಸಿದ್ದು, ಮತ್ತೊಮ್ಮೆ ಅಧಿಕಾರ ಹಿಡಿದು ಅಕ್ಕಿ ಹಗರಣ ಮುಚ್ಚಿಹಾಕುವ ಹುನ್ನಾರ ನಡೆಸಿದೆ. ಆದ್ದರಿಂದ ಭಾನುವಾರ ನಡೆಯಲಿರುವ ಚುನಾವಣೆಯನ್ನು ಕಾಂಗ್ರೆಸ್ ಬಹಿಷ್ಕರಿಸಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್ ತಿಳಿಸಿದರು.