ಗ್ರಾಮೀಣ ಅಂಚೆ ನೌಕರರ ಮುಷ್ಕರಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಂಚೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಅಂಚೆ ಕಚೇರಿಯ ಮುಂಭಾಗ ಅನಿರ್ದಿಷ್ಟ ಕಾಲ ಮುಷ್ಕರವನ್ನು ನಡೆಸಿದರು.ಬುಧವಾರ ಬೆಳಿಗ್ಗೆ ಗ್ರಾಮೀಣ ಭಾಗದ ಅಂಚೆ ನೌಕರರು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ವತಿಯಿಂದ ಧರಣಿಯನ್ನು ನಡೆಸಿದರು,ಸಂಘದ ತಾಲೂಕು ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ಅಂಚೆ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರ ಜೀವನೋಪಾಯಕ್ಕೆ ತೊಂದರೆಯಾಗಿದ್ದು, ಈಗ ನಾವು 5 ಗಂಟೆಗಳ ಕಾಲ ಕರ್ತವ್ಯವನ್ನು ನಿರ್ವಹಿಸುವ ಪದ್ದತಿ ಇದೆ. ಅದನ್ನು 8 ಗಂಟೆಗಳ ಕಾಲ ಪರಿಗಣಿಸಿ ವೇತನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.