ಸಿದ್ದು ಸರ್ಕಾರದಲ್ಲಿ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಆದ್ಯತೆರಾಮನಗರ: ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಮತ್ತು ಬಿಜೆಪಿ ಸರ್ಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಅನುದಾನವನ್ನು ಹಂತ ಹಂತವಾಗಿ ಕಡಿತಗೊಳಿಸುತ್ತಲೇ ಬಂದಿತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 850 ಕೋಟಿ ಇದ್ದ ಅನುದಾನವನ್ನು 4500 ಕೋಟಿ ರು.ಗಳಿಗೆ ಹೆಚ್ಚಿಸುವುದರ ಜೊತೆಗೆ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಗಳನ್ನು ಮತ್ತೆ ಜಾರಿಗೆ ತಂದು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಒತ್ತು ನೀಡಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.