ರಂಗೋಲಿ ಬಿಡಿಸಿ, ಹೂ ಚೆಲ್ಲಿ ಕಸದ ಹಾಕದಂತೆ ಮನವಿಚನ್ನಪಟ್ಟಣ: ನಗರ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಸ್ಥಳಗಳನ್ನು ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ, ಹೂ ಚೆಲ್ಲಿವ ಮೂಲಕ ಜಾಗೃತಿ ಮೂಡಿಸುವ ಕೆಲಸಕ್ಕೆ ನಗರಸಭೆ ಮುಂದಾಗಿದೆ.