ಜಿಲ್ಲೆಯ 60 ಗ್ರಾಮಗಳಲ್ಲಿ ಕುಡಿವ ನೀರಿನ ಆತಂಕರಾಮನಗರ: ಮುಂಗಾರು ಮಳೆ ಸಂಪೂರ್ಣ ಕ್ಷೀಣಿಸಿದ ಪರಿಣಾಮ ಜಿಲ್ಲೆಯಲ್ಲಿ ಬೆಳೆ ಹಾನಿ ಜೊತೆಗೆ ಕೆರೆಕಟ್ಟೆಗಳು ಬರಿದಾಗುತ್ತಿದ್ದು, ಮಳೆ ಬಾರದಿದ್ದರೆ 62 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ.ಜಿಲ್ಲೆಯ ರಾಮನಗರ ಟೌನ್ ನ ಕೆಲ ವಾರ್ಡುಗಳು ಹಾಗೂ ಮಾಗಡಿ ತಾಲೂಕಿನ ತಗ್ಗಿಕುಪ್ಪೆ, ವಿಠಲಪುರ, ಮತ್ತಾ ಗ್ರಾಮಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 62 ಗ್ರಾಮಗಳನ್ನು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಗುರುತಿಸಿದೆ.