ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾರ್ಯಕರ್ತರು ಬೆಂಬಲಿಸಿಚನ್ನಪಟ್ಟಣ: ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಜಗಳದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾಯಿತು. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಪಕ್ಷದ ವರಿಷ್ಠರು ನಿರ್ಧರಿಸಿದ್ದು, ಇದಕ್ಕೆ ಎಲ್ಲಾ ಕಾರ್ಯಕರ್ತರು ಬೆಂಬಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.