ನಾಳೆ ವಿಧಾನಸೌಧಕ್ಕೆ ಮುತ್ತಿಗೆ: ಬೈರೇಗೌಡರಾಮನಗರ: ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಹಾಗೂ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಅ.4ರಂದು ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಎಲ್. ಬೈರೇಗೌಡ ತಿಳಿಸಿದರು.