ಮತಗಳಿಕೆ ಲೆಕ್ಕಾಚಾರದಲ್ಲಿ ತೊಡಗಿದ್ದ ಮುಖಂಡರುಚನ್ನಪಟ್ಟಣ: ಬೆಂಗಳೂರು ಲೋಕಸಭಾ ಚುನಾವಣೆ ಶುಕ್ರವಾರ ಮುಗಿದಿದ್ದು, ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಕಾಂಗ್ರೆಸ್ ಹಾಗೂ ಎನ್‌ಡಿಎ ಮೈತ್ರಿ ಕೂಟದ ನಾಯಕರು ರಿಲ್ಯಾಕ್ಸ್ ಮೂಡಿಗೆ ಜಾರಿದ್ದರೆ, ಇನ್ನು ಕೆಲವರು ಮತಗಳಿಕೆಯ ಲೆಕ್ಕಾಚಾರದಲ್ಲಿ ತೊಡಗಿದ್ದರು.