ಘಾಟಿ ಸುಬ್ರಹ್ಮಣ್ಯದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವಮಧ್ಯಾಹ್ನ 12.15 ರಿಂದ 12.30ರ ಶುಭ ಮೇಷ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರಸಿದ್ಧ ನಾಗದೇವತೆಯ ಆರಾಧನಾ ಕ್ಷೇತ್ರವಾಗಿರುವ ಘಾಟಿಯಲ್ಲಿ ಪ್ರತಿವರ್ಷ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ರಥೋತ್ಸವ ನಡೆಯುತ್ತದೆ. ಮುಜರಾಯಿ ಇಲಾಖೆ ಮತ್ತು ಭಕ್ತಾದಿಗಳ ಸಹಯೋಗದಲ್ಲಿ ನಡೆದ ಶ್ರೀಸ್ವಾಮಿಯ ಪೂಜಾ ವಿಧಿವಿಧಾನಗಳು ಮತ್ತು ವೈಭವದ ಉತ್ಸವಗಳು ಭಕ್ತಾದಿಗಳ ಮನಸೂರೆಗೊಂಡವು.