ಕುಟುಂಬ ರಾಜಕೀಯ ಕುರಿತು ಮಾತಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲಚನ್ನಪಟ್ಟಣ: ವಿರೋಧ ಪಕ್ಷದವರು ಕುಟುಂಬ ರಾಜಕಾರಣ ಅಂತಾರೆ. ಕಾಂಗ್ರೆಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ೧೨ಕ್ಕೂ ಹೆಚ್ಚು ಜನ ಅಪ್ಪ, ಅಣ್ಣ, ತಮ್ಮ ಸೇರಿದಂತೆ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ. ಅವರಿಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.