ಘೋಷಣೆಯಾದ ನಾಲ್ಕೂ ಯೋಜನೆಗಳು ಜಾರಿಗೆರಾಮನಗರ: ಕಳೆದ ಬಾರಿ ಆಯವ್ಯಯದಲ್ಲಿ ಜಿಲ್ಲೆಗೆ 4 ಯೋಜನೆಗಳು ಘೋಷಣೆಯಾಗಿದ್ದವು. ಅವುಗಳಲ್ಲಿ 2 ಯೋಜನೆಗಳ ಪ್ರಕ್ರಿಯೆ ಚಾಲನೆಯಲ್ಲಿದ್ದರೆ, ಉಳಿದ 2 ಯೋಜನೆಗಳಿಗೆ ಹಣಕಾಸಿನ ಅನುಮೋದನೆ ಸಿಕ್ಕಿದೆ. ಜಿಲ್ಲೆಯವರೇ ಆದ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿ ಹುದ್ದೆಯಲ್ಲಿರುವ ಕಾರಣ ಘೋಷಣೆಯಾಗಿರುವ ಯೋಜನೆಗಳೆಲ್ಲವೂ ಹಣಕಾಸಿನ ಕೊರತೆ ಇಲ್ಲದೆ ಅನುಷ್ಠಾನಗೊಳ್ಳುತ್ತಿವೆ.