ಮತ್ತೆ ತಮಿಳುನಾಡಿಗೆ ನೀರು: ಕಕಜವೇ ಖಂಡನೆಚನ್ನಪಟ್ಟಣ: ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ತಾತ್ಪಾರ್ಯ ಉಂಟಾಗಿರುವ ಹೊತ್ತಿನಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿನ ನೀರು ಹರಿಸುವಂತೆ ಆದೇಶಿಸಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.