ಗೌಡಗೆರೆ ಚಾಮುಂಡೇಶ್ವರಿದೇವಿ ಅದ್ಧೂರಿ ರಥೋತ್ಸವಆಷಾಢ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಶ್ರೀ ಕ್ಷೇತ್ರಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಭೀಮನ ಅಮಾವಾಸ್ಯೆಯಂದು ಸಹ ಲಕ್ಷಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಬುಧವಾರ ಮಧ್ಯರಾತ್ರಿಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು. ಕೇವಲ ರಾಜ್ಯವಷ್ಟೇ ಅಲ್ಲದೇ ಹೊರರಾಜ್ಯಗಳಿಂದಲೂ ಸಹಸ್ರಾರು ಭಕ್ತರು ಕ್ಷೇತ್ರದಲ್ಲಿ ನಡೆದ ಭೀಮನ ಅಮಾವಾಸ್ಯೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಲ್ಲಾ ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.