ಧರ್ಮಸ್ಥಳ ವಿರುದ್ಧ ಅಪಪ್ರಚಾರ: ನಾಳೆ ಪ್ರತಿಭಟನೆರಾಮನಗರ: ಪವಿತ್ರ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳದ ವಿರುದ್ಧ ದುಷ್ಟರ ಕೂಟ ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಇದನ್ನು ಖಂಡಿಸಿ ಆಗಸ್ಟ್ 13ರಂದು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಧರ್ಮಸ್ಥಳ ಭಕ್ತಾಭಿಮಾನ ವೇದಿಕೆ ಸದಸ್ಯ ಹಾಗೂ ಬಮೂಲ್ ನಿರ್ದೇಶಕ ಹರೀಶ್‌ಕುಮಾರ್ ತಿಳಿಸಿದರು.