ನಾಳೆ ಜೋಶಿ ವಿರುದ್ಧ ಪ್ರತಿಭಟನಾ ಸಮಾವೇಶರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆರ್ಥಿಕ ಅಶಿಸ್ತು ಮತ್ತು ಸರ್ವಾಧಿಕಾರಿ ಧೋರಣೆ ವಿರುದ್ಧ ಮೇ 17ರಂದು ಮಂಡ್ಯದಲ್ಲಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ‘ಪ್ರತಿಭಟನಾ ಸಮಾವೇಶ’ ನಡೆಸಿ ಮಹೇಶ್ ಜೋಶಿ ತೊಲಗಿಸಿ ಕಸಾಪ ಉಳಿಸಿ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಂಡ್ಯ ಘಟಕದ ಮಾಜಿ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ ತಿಳಿಸಿದರು.