ದೊಡ್ಡಬಳ್ಳಾಪುರದಲ್ಲಿ ಐತಿಹಾಸಿಕ ಪ್ರಸಿದ್ಧ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವರಥೋತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಪಾಲ್ಗೊಂಡಿದ್ದು, ಅಗತ್ಯ ಭದ್ರತೆ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆ ಅಲ್ಲಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅಪರಾಧ ಕೃತ್ಯಗಳ ಬಗ್ಗೆ ತೀವ್ರ ನಿಗಾ ವಹಿಸಿದೆ. ನಗರದಲ್ಲಿ ಸರಗಳ್ಳತನದಂಥ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಕಣ್ಗಾವಲು ವ್ಯವಸ್ಥೆ ಮಾಡಿದ್ದಾರೆ.