ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗ್ರಾಮಾಧಿಕಾರಿಗಳ ಮುಷ್ಕರಕಂದಾಯ ಇಲಾಖೆ ನೌಕರರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ, ಕಳೆದ ಎರಡು ವರ್ಷಗಳಿಂದ ೨೧ ಬೇಡಿಕೆಗಳನ್ನು ಸಲ್ಲಿಸಲಾಗಿದ್ದು, ಈವರೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರಕಿಲ್ಲ. ಮೂಲಭೂತ ಸೌಕರ್ಯಗಳಾದ ಗ್ರಾಮಾಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಟೇಬಲ್ ಕುರ್ಚಿ, ಅಲ್ಮೆರಾ, ಗುಣಮಟ್ಟದ ಮೊಬೈಲ್ ಪೋನ್ ಜೊತೆ ಸಿಯುಜಿ ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್, ಲ್ಯಾಪ್ ಟ್ಯಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ವ್ಯವಸ್ಥೆಯನ್ನು ಕಲ್ಪಿಸಬೇಕು,