ಜಿಲ್ಲೆಯಲ್ಲಿ ಎಕೋ ಟೂರಿಸಂಗೆ ಉತ್ತಮ ವಾತಾವರಣ: ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಸವಾರರಿಗೆ ಲೈಸೆನ್ಸ್ಗಳೇ ಇರುವುದಿಲ್ಲ. ಸಾರಿಗೆ ಇಲಾಖೆ ವತಿಯಿಂದ ಕ್ಯಾಂಪ್ ಮಾಡಿ ಡ್ರೈವಿಂಗ್ ಲೈಸೆನ್ಸ್ ಕೊಡಲು ಕ್ರಮ ವಹಿಸಿ ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ರಾಮನಗರ ನಗರಸಭೆ ವ್ಯಾಪ್ತಿಯಲ್ಲಿ ನೆಟ್ಕಲ್ ಕುಡಿಯುವ ನೀರು ಯೋಜನೆ ಸರಿಯಾಗಿ ನಡೆದಿಲ್ಲ, ಆದರೂ ೬ ಕೋಟಿ ಹಣ ಖರ್ಚಾಗಿದೆ ಎಂದು ಶಾಸಕರು ಸಭೆಯ ಗಮನ ಸೆಳೆದಿದ್ದಾರೆ. ಸರ್ಕಾರದ ಹಣ ದುರ್ಬಳಕೆ ಆಗಬಾರದು, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದರು.