2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಿ: ಆರ್. ಚಂದ್ರಯ್ಯರಾಮನಗರ: ಜಿಲ್ಲೆಯಲ್ಲಿ ನವೆಂಬರ್ 03 ರಿಂದ 19ರ ವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಥಮಿಕ ಹಂತದಲ್ಲೇ ಕುಷ್ಠರೋಗ ಪ್ರಕರಣಗಳನ್ನು ಪತ್ತೆಹಚ್ಚಿ, ಚಿಕಿತ್ಸೆ ನೀಡಿ ಗುಣಮುಖರನ್ನಾಗಿಸುವ ಮೂಲಕ ಜಿಲ್ಲೆಯನ್ನು 2027ರೊಳಗೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು