ಆನ್ಲೈನ್ ವೈದ್ಯಕೀಯ ಸೌಲಭ್ಯ ಜಾರಿಗೆ ಚಿಂತನೆರಾಮನಗರ: ಜಿಲ್ಲೆಯ ನಾಗರಿಕರಿಗೆ ಸಕಾಲದಲ್ಲಿ ಅಗತ್ಯ ಚಿಕಿತ್ಸೆ ದೊರೆಯಲು ಅನುಕೂಲವಾಗುವಂತಹ ಆನ್ಲೈನ್ ವೈದ್ಯಕೀಯ ಸಲಹೆ (ಟೆಲಿಮೆಡಿಸನ್) ಮಾದರಿಯಲ್ಲಿ ಜಿಲ್ಲೆಯಲ್ಲಿ ಆನ್ಲೈನ್ ವೈದ್ಯಕೀಯ ಸೌಲಭ್ಯ ಜಾರಿಗೊಳಿಸಲು ಚಿಂತಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಸದ ಡಾ. ಸಿ.ಎನ್. ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.