ಎಚ್ಡಿಕೆ ಕೆಲಸ ಮಾಡದ್ದಕ್ಕೆ ಜನ ನನ್ನ ಗೆಲ್ಲಿಸಿದ್ರು: ಸಿಪಿವೈಚನ್ನಪಟ್ಟಣ: ಕಳೆದ ಆರು ವರ್ಷಗಳ ಕಾಲ ಕ್ಷೇತ್ರದ ಶಾಸಕರಾಗಿದ್ದ ಕುಮಾರಸ್ವಾಮಿ ಅಭಿವೃದ್ಧಿ ಕುರಿತು ಚಿಂತಿಸಲಿಲ್ಲ. ಅವರ ಅವಧಿಯಲ್ಲಿ ತಾಲೂಕು ಅಧ್ವಾನವಾಗಿದ್ದು, ೧೦ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಚನ್ನಪಟ್ಟಣ ಉಪಚುನಾವಣೆ ಧರ್ಮ ಅಧರ್ಮದ ನಡುವಿನ ಚುನಾವಣೆಯಾಗಿತ್ತು. ಅವರು ಏನೂ ಕೆಲಸ ಮಾಡದಿದ್ದಕ್ಕೆ ಜನ ನನ್ನನ್ನು ಗೆಲ್ಲಿಸಿದರು ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡಿದರು.