ದರೋಡೆಕೋರರ ಬಂಧನ: 10 ಲಕ್ಷ ಮೌಲ್ಯದ ಕಾರು ವಶಕ್ಕೆಕಳೆದ ನ. 30ರಂದು ತಡರಾತ್ರಿ ಮಾಗಡಿ- ಬೆಂಗಳೂರು ರಸ್ತೆಯಲ್ಲಿ ಮಾಗಡಿ ತಾಲೂಕಿನ ಜ್ಯೋತಿಪಾಳ್ಯ ಕ್ರಾಸ್ ಬಳಿ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದನ್ನು ಹೊಂಡಾ ಸಿಟಿ ಕಾರಿನಲ್ಲಿ ಅಡ್ಡಗಟ್ಟಿ ಕಾರಿನಲ್ಲಿದ್ದವರಿಗೆ ಮಾರಕಾಸ್ತ್ರಗಳಿಂದ ಹಲ್ಲೆಗೈದು 1400 ರು. ನಗದು, ಮೊಬೈಲ್ ಹಾಗೂ ಸ್ವಿಫ್ಟ್ ಕಾರನ್ನು ದೋಚಿಕೊಂಡು ಹೋಗಿದ್ದು, ಈ ಬಗ್ಗೆ ಮಾಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.