ಕೊಳವೆಬಾವಿ ಕೊರೆಯಲುನಿರಪೇಕ್ಷಣಾ ಪತ್ರ ಕಡ್ಡಾಯ: ಡೀಸಿ ಬಸವರಾಜುಅಂತರ್ಜಲ ಮೌಲೀಕರಣದ ವರದಿ ಪ್ರಕಾರ ಜಿಲ್ಲೆಯಲ್ಲಿರುವ ನಾಲ್ಕು ತಾಲೂಕುಗಳನ್ನು ಅಂತರ್ಜಲ ಅತಿ ಬಳಕೆ ತಾಲೂಕುಗಳೆಂದು ವರ್ಗೀಕರಿಸಲಾಗಿದ್ದು, ಜಿಲ್ಲೆಯಲ್ಲಿ ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಗಣಿಗಾರಿಕೆ, ಮನೋರಂಜನೆ ಉದ್ದೇಶಕ್ಕಾಗಿ ಅಂತರ್ಜಲ ಬಳಸುವವರು ಅಂತರ್ಜಲ ಪ್ರಾಧಿಕಾರದಿಂದ ನಿರಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.