ಕಾಂಗ್ರೆಸ್ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.