: ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ. ಕೇಂದ್ರ ಸರ್ಕಾರದ ತಪ್ಪು ನೀತಿಗಳೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಜನರಲ್ಲಿ ತಪ್ಪು ಸಂದೇಶ ಹರಡುತ್ತಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದರು.

ಬಂಟ್ವಾಳ: ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿದೆ. ಕೇಂದ್ರ ಸರ್ಕಾರದ ತಪ್ಪು ನೀತಿಗಳೇ ಇದಕ್ಕೆ ಪ್ರಮುಖ ಕಾರಣವಾಗಿದ್ದು, ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ಜನರಲ್ಲಿ ತಪ್ಪು ಸಂದೇಶ ಹರಡುತ್ತಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪಿಸಿದರು.

ಪಾಣೆಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಉಳಿಸುವ ಬಗ್ಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದವರೇ ಹೋರಾಟ ನಡೆಸುತ್ತಿರುವುದು ವಿಪರ್ಯಾಸ. ಇದು ರಾಹುಲ್ ಗಾಂಧಿಯವರ ಹೋರಾಟಕ್ಕೆ ಪೂರಕವಾಗಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಜಿದ್ದಾಜಿದ್ದಿಯ ನಡುವೆಯೂ ಕೇಂದ್ರ ಸರ್ಕಾರದ ವೈಫಲ್ಯ ಹಾಗೂ ತಪ್ಪು ಧೋರಣೆಗಳ ವಿರುದ್ಧ ರಾಹುಲ್ ಗಾಂಧಿ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ ಎಂದರು.

ಅದಾನಿ, ಅಂಬಾನಿ ಅವರ ಹಿತಾಸಕ್ತಿಗೆ ಪೂರಕವಾಗಿ ಕೇಂದ್ರದ ನಿರ್ಧಾರಗಳು ರೂಪುಗೊಳ್ಳುತ್ತಿವೆ. ಎಲ್ಲವನ್ನೂ ಮಾರಾಟ ಮಾಡುವುದೇ ಬಿಜೆಪಿಯ ಆಡಳಿತ ನೀತಿಯಾಗಿದೆ ಎಂದು ಟೀಕಿಸಿದರು.

ಬಿ.ಆರ್. ಅಂಚನ್, ಚಂದ್ರಶೇಖರ ಭಂಡಾರಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬೇಬಿ ಕುಂದರ್, ಜಯಂತಿ ಪೂಜಾರಿ, ಅಬ್ಬಾಸ್ ಅಲಿ, ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ ನವಾಜ್, ಲವೀನಾ ಮೋರೆಸ್, ಐಡಾ ಸುರೇಶ್ , ಕುಶಲ ಪೆರಾಜೆ, ನಿರಂಜನ ರೈ, ಸಂಪತ್ ಕುಮಾರ್ ಹಾಗೂ ಸಿದ್ದಿಕ್ ಇದ್ದರು.