ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ
ಬಿ.ರಮಾನಾಥ ರೈ ಅಭಿಮಾನಿ ಬಳಗ ಹಾಗೂ ಸಕ್ಸಸ್ ಪರಿವಾರ ಕುಕ್ಕರಬೆಟ್ಟು ಆಶ್ರಯದಲ್ಲಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ. ರಮಾನಾಥ ರೈ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದನೆ, ಸನ್ಮಾನ ಹಾಗೂ ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ ಸಮಾರಂಭ ನೇರಳಕಟ್ಟೆಯ ಜನಪ್ರಿಯ ಗಾರ್ಡನ್‌ನಲ್ಲಿ ನಡೆಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಮಾನಾಥ ರೈ, ಬಂಟ್ವಾಳ ಕ್ಷೇತ್ರ ಹಾಗೂ ಈ ರಾಜ್ಯದ ಜನತೆ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಯಾವತ್ತೂ ಚಿರಋಣಿಯಾಗಿದ್ದೇನೆ. ಭಾರತದ ಸಂವಿಧಾನದ ಆಶಯಗಳಿಗೆ ಬದ್ಧನಾಗಿ ಯಾವುದೇ ರೀತಿಯ ತಾರತಮ್ಯ ಮಾಡದೇ ಕಾರ್ಯ ನಿರ್ವಹಿಸಿದ್ದೇನೆ ಎಂದ ಅವರು ಕಳೆದ 6 ವರ್ಷಗಳಿಂದ ನನ್ನ ಹುಟ್ಟು ಹಬ್ಬವನ್ನು ಆಚರಿಸುತ್ತಾ ಬಂದಿರುವ ಫಾರೂಕ್ ಬಯಬೆ ಈ ಬಾರಿ ನನಗೆ ಅಭಿನಂದನೆಯ ಜೊತೆಗೆ 74 ಮಂದಿ ಕಾಂಗ್ರೆಸ್‌ನ ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ ಮಾಡಿರುವುದು ಶ್ಲಾಘನೀಯ ಎಂದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮುಹಮ್ಮದ್, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ಡಾ.ರಘು ಮಾತನಾಡಿದರು.ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ, ಜಯಂತಿ ವಿ.ಪೂಜಾರಿ, ಪ್ರಮುಖರಾದ ಬಿ.ಎಂ.ಅಬ್ಬಾಸ್ ಅಲಿ, ಸುದೀಪ್ ಕುಮಾರ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಮುರಳೀಧರ ರೈ ಮಠಂದಬೆಟ್ಟು, ಮುಹಮ್ಮದ್ ಬಡಗನ್ನೂರು, ಹಮೀದ್ ಸಕ್ಸಸ್ ಕುಕ್ಕರಬೆಟ್ಟು, ಕೆ.ಬಿ.ಸಲೀಂ ಹಾಜಿ, ಅಹ್ಮದ್ ಕುಕ್ಕರಬೆಟ್ಟು, ಸಿರಾಜ್ ಕುಕ್ಕರಬೆಟ್ಟು, ರಝಾಕ್ ಕುಕ್ಕರಬೆಟ್ಟು, ಸಮಿತಾ ಡಿ.ಪೂಜಾರಿ, ಮುಹಮ್ಮದ್ ಕುಕ್ಕರಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ವೇಳೆ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ರಮಾನಾಥ ರೈ ಅವರನ್ನು ಸನ್ಮಾನಿಸಲಾಯಿತು.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಸಹಕಾರ ಕ್ಷೇತ್ರದ ಸಾಧಕ ತೋಯಜಾಕ್ಷ ಶೆಟ್ಟಿ ಪೆರ್ನೆ ಹಾಗೂ ಸಮಾಜ ಸೇವಕ ಸುದರ್ಶನ್ ಪಡಿಯಾರ್ ವಿಟ್ಲ ಅವರನ್ನು ಸನ್ಮಾನಿಸಲಾಯಿತು.
ಒಟ್ಟು 74 ಮಂದಿ ಕಾಂಗ್ರೆಸ್ ಕಾರ್ಯಕರ್ತರಗೆ ಗೌರವಾರ್ಪಣೆ ಸಲ್ಲಿಸಲಾಯಿತು.ರಮಾನಾಥ ರೈ ಅಭಿಮಾನಿ ಬಳಗದ ಮುಖ್ಯಸ್ಥ, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ ಸ್ವಾಗತಿಸಿದರು. ನೆಟ್ಲಮುಡ್ನೂರು ಗ್ರಾಮ ಪಂಚಾಯಿತಿ ಸದಸ್ಯ ಲತೀಫ್ ನೇರಳಕಟ್ಟೆ ವಂದಿಸಿದರು. ಹಮೀದ್ ಗೋಳ್ತಮಜಲು ನಿರೂಪಿಸಿದರು.