ಸಾರಾಂಶ
ಕಾವೇರಿ ನದಿ ದಂಡೆಯಲ್ಲಿರುವ ರಾಮನಾಥಪುರದಲ್ಲಿ ಡಿ.7ರಂದು ರಥೋತ್ಸವದ ನಡೆಯುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿರುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಹಸೀಲ್ದಾರ್ ಕೆ.ಸಿ. ಸೌಮ್ಯ ಹೇಳಿದರು. ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಜಾತ್ರೆ ಹಾಗೂ ರಥೋತ್ಸವ ಪ್ರಯುಕ್ತ ತಾಲೂಕು ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 7ರಂದು ಪ್ರಸನ್ನ ಶ್ರೀ ಸುಬ್ರಮಣ್ಯಸ್ವಾಮಿ ಮಹಾ ರಥೋತ್ಸವ ಹಾಗೂ ಒಂದು ತಿಂಗಳ ಕಾಲ ನಡೆಯುವ ಜಾತ್ರೆಗೆ ಈಗಾಗಲೇ ಸಿದ್ಧತೆ ಆಗಿದೆ ಎಂದರು.
ಕನ್ನಡಪ್ರಭ ವಾರ್ತೆ ರಾಮನಾಥಪುರ
ಕಾವೇರಿ ನದಿ ದಂಡೆಯಲ್ಲಿರುವ ರಾಮನಾಥಪುರದಲ್ಲಿ ಡಿ.7ರಂದು ರಥೋತ್ಸವದ ನಡೆಯುವ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿರುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಹಸೀಲ್ದಾರ್ ಕೆ.ಸಿ. ಸೌಮ್ಯ ಹೇಳಿದರು.ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ಜಾತ್ರೆ ಹಾಗೂ ರಥೋತ್ಸವ ಪ್ರಯುಕ್ತ ತಾಲೂಕು ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 7ರಂದು ಪ್ರಸನ್ನ ಶ್ರೀ ಸುಬ್ರಮಣ್ಯಸ್ವಾಮಿ ಮಹಾ ರಥೋತ್ಸವ ಹಾಗೂ ಒಂದು ತಿಂಗಳ ಕಾಲ ನಡೆಯುವ ಜಾತ್ರೆಗೆ ಈಗಾಗಲೇ ಅಂಗಡಿ ಮುಂಗಟ್ಟುಗಳು ಬಂದಿದ್ದು ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಗ್ರಾಮ ಪಂಚಾಯಿತಿ ಸೇರಿದಂತೆ ತಮ್ಮ - ತಮ್ಮ ಇಲಾಖೆಯಿಂದ ಸುಲಲಿತವಾಗಿ ಜಾತ್ರೆ ಮುಗಿಯುವವರೆಗೆ ಎಲ್ಲರೂ ಸಹಕರಿಸಿ ಎಂದು ತಹಸೀಲ್ದಾರ್ ಕೆ.ಸಿ. ಸೌಮ್ಯ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವನಕುಮಾರಿ ಕುಮಾರ್, ಸದಸ್ಯರಾದ ಪುಷ್ಪ, ಸಿದ್ದರಾಜು, ದೇವಾಲಯದ ಪಾರುಪತ್ತೇಗಾರ್ ರಮೇಶ್ ಭಟ್, ಗ್ರಾಮದ ಮುಖಂಡರಾದ ಶ್ರೀನಿಧಿ, ರಘು, ಕೇಶವ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕುಮಾರಸ್ವಾಮಿ, ಕಾರ್ಯದರ್ಶಿ ರೇವಣ್ಣ, ಕಂದಾಯ ಇಲಾಖೆಯ ಎಂ.ಸ್ವಾಮಿ, ಉಪತಹಸೀಲ್ದಾರ್ ರವಿ, ರಾಜಸ್ವ ನೀರಿಕ್ಷಕರು ಭಾಸ್ಕರ್, ಆರೋಗ್ಯ ಇಲಾಖೆ ಡಾ. ಪೂಜಾ, ಕೆ.ಇ.ಬಿ. ಇಲಾಖೆ ಚಿನ್ನಸ್ವಾಮಿ, ಪ್ರದೀಪ್, ಪಿಎಸ್‌ಐ ರಾಜಣ್ಣ ಮುಂತಾದವರು ಇದ್ದರು.