ಸಾರಾಂಶ
ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿಗೆ ದೊಡ್ಡಗಾವನಹಳ್ಳಿ ಏತ ನೀರಾವರಿ ಯೋಜನೆಯಿಂದ ಕೆರೆಗಳನ್ನು ತುಂಬಿಸುವ ಯೋಜನೆಗೆ ಶಾಸಕರು ಎ ಮಂಜು ಶನಿವಾರ ಚಾಲನೆ ನೀಡಿದ ನಂತರ ಮಾತನಾಡಿದರು. ಗಂಗನಾಳು ಏತ ನೀರಾವರಿ ಯೋಜನೆಯ ಎರಡನೇ ಹಂತದ ದೊಡ್ಡಗಾವನಹಳ್ಳಿ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸಲು ಇಂದು ಚಾಲನೆ ನೀಡಿದ್ದು ಸುಮಾರು 40ಕ್ಕೂ ಹೆಚ್ಚು ಕೆರೆಗಳು ತುಂಬುತ್ತಿದ್ದು ಅಂತರ್ಜಲ ಹೆಚ್ಚಾಗುತ್ತಿದ್ದು ರೈತರಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತಿದ್ದು ರೈತರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ರಾಮನಾಥಪುರ: ಈ ವರ್ಷ ಮುಂಗಾರು ಉತ್ತಮವಾಗಿದ್ದು ಅಣೆಕಟ್ಟುಗಳು ಭರ್ತಿಯಾಗಿವೆ. ಈ ಭಾಗದ ರೈತರು ಹಿಂಗಾರು ಭತ್ತ, ರಾಗಿ, ಜೋಳ ಮತ್ತು ಇನ್ನಿತರ ದ್ವಿದಳ ಬೆಳೆಗಳನ್ನು ಮಾಡಿ ಇದರ ಸದುಪಯೋಗ ಪಡೆದುಕೊಂಡು ಆದಾಯ ದ್ವಿಗುಣವಾಗುವಂತಹ ಮಿಶ್ರಬೆಳೆಗಳನ್ನು ಬೆಳೆಯುವಂತೆ ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು ಮನವಿ ಮಾಡಿದರು. ಕಸಬಾ ಮತ್ತು ದೊಡ್ಡಮಗ್ಗೆ ಹೋಬಳಿಗೆ ದೊಡ್ಡಗಾವನಹಳ್ಳಿ ಏತ ನೀರಾವರಿ ಯೋಜನೆಯಿಂದ ಕೆರೆಗಳನ್ನು ತುಂಬಿಸುವ ಯೋಜನೆಗೆ ಶಾಸಕರು ಎ ಮಂಜು ಶನಿವಾರ ಚಾಲನೆ ನೀಡಿದ ನಂತರ ಮಾತನಾಡಿದರು. ಗಂಗನಾಳು ಏತ ನೀರಾವರಿ ಯೋಜನೆಯ ಎರಡನೇ ಹಂತದ ದೊಡ್ಡಗಾವನಹಳ್ಳಿ ಯೋಜನೆಯಿಂದ ಕೆರೆಗಳಿಗೆ ನೀರು ತುಂಬಿಸಲು ಇಂದು ಚಾಲನೆ ನೀಡಿದ್ದು ಸುಮಾರು 40ಕ್ಕೂ ಹೆಚ್ಚು ಕೆರೆಗಳು ತುಂಬುತ್ತಿದ್ದು ಅಂತರ್ಜಲ ಹೆಚ್ಚಾಗುತ್ತಿದ್ದು ರೈತರಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತಿದ್ದು ರೈತರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು ಎಲ್ಲಾ ರೈತ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.