ಕುಮಾರಸ್ವಾಮಿ, ಇತರರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಚಳವಳಿ

| Published : Aug 25 2024, 01:58 AM IST / Updated: Aug 25 2024, 12:30 PM IST

ಕುಮಾರಸ್ವಾಮಿ, ಇತರರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಚಳವಳಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಇತರರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಯವರು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಶನಿವಾರ ರಾಜ್ಯಪಾಲರಿಗೆ ಪತ್ರ ಚಳವಳಿ ಹಮ್ಮಿಕೊಂಡಿದ್ದರು.

 ಮೈಸೂರು:  ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಇತರರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ಅಹಿಂದ ಸಂಘಟನೆಯವರು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಶನಿವಾರ ರಾಜ್ಯಪಾಲರಿಗೆ ಪತ್ರ ಚಳವಳಿ ಹಮ್ಮಿಕೊಂಡಿದ್ದರು.

ತನಿಖೆಯೇ ಇನ್ನೂ ಆರಂಭವಾಗದ ಎಂಡಿಎ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವ ಪಾತ್ರವೂ ಇಲ್ಲದಿದ್ದರೂ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನ ಬಾಹಿರ ನಡೆಯನ್ನು ಅನುಸರಿಸಿದ್ದಾರೆ. ಪಕ್ಷಪಾತ ಧೋರಣೆಯನ್ನು ರಾಜಭವನ, ರಾಜ್ಯಪಾಲರು ತೋರ್ಪಡಿಸಿರುವುದು ಸರಿಯಲ್ಲ ಎಂದು ಅವರು ಖಂಡಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ 8- 10 ತಿಂಗಳುಗಳಿಂದ ಲೋಕಾಯುಕ್ತ ಮತ್ತು ಎಸ್‌ಐಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ವಿನಂತಿಸಿದ್ದರೂ, ರಾಜ್ಯಪಾಲರು ಅನುಮತಿ ನೀಡಿಲ್ಲ. ಹೀಗಾಗಿ, ಮತ್ತೊಮ್ಮೆ ಎಸ್‌ಐಟಿ ಡಿಜಿಪಿಐ ಮತ್ತು ಡಿಜಿ ಅವರು ಆ.20 ರಂದು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರೂ ಇಲ್ಲಿಯವರೆವಿಗೂ ಅನುಮತಿ ನೀಡಿದಿಲ್ಲ ಎಂದು ಅವರು ಕಿಡಿಕಾರಿದರು.

ಅಲ್ಲದೆ, ಜನಾರ್ಧನ ರೆಡ್ಡಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೂ ಸಕ್ಷಮ್ಯ ಪ್ರಾಧಿಕಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರೂ ಅನುಮತಿ ನೀಡಿಲ್ಲ. ಇದರ ಅರ್ಥ ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪಕ್ಷದ ವಕ್ತಾರರು ಎಂದು ಸಾಬೀತಾಗಿದೆ ಎಂದು ಅವರು ಟೀಕಿಸಿದರು.

ರಾಜ್ಯಪಾಲರು ಇನ್ನಾದರೂ ಎಚ್ಚೆತ್ತು ಈ ನಾಲ್ಕು ಜನಗಳ ವಿರುದ್ಧ ಈ ಕೂಡಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು. ಇಲ್ಲದಿದ್ದರೇ ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನುಬಾಹಿರವಾಗಿ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಆರೋಪಗಳ ಹಿನ್ನೆಲೆಯಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದರಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಮು, ಮುಖಂಡರಾದ ಎಚ್.ಎಸ್. ಪ್ರಕಾಶ್, ಯೋಗೇಶ್ ಉಪ್ಪಾರ್, ರವಿನಂದನ್, ಲೋಕೇಶ್ ಕುಮಾರ್, ಮೊಗಣ್ಣಾಚಾರ್, ಕೇಶವ, ಬಸಪ್ಪ, ಎನ್.ಆರ್. ಸಿದ್ದು, ಸುನಿಲ್ ನಾರಾಯಣ್, ಮಹೇಂದ್ರ ಕಾಗಿನೆಲೆ, ರವಿ, ಹರೀಶ್ ಮೊಗಣ್ಣ, ರಾಜೇಶ್, ಲಕ್ಷ್ಮಿ, ಶೋಭ, ಸಲೀಂ, ರಹೀಂ, ನಾಸಿರ್, ಗಂಟಯ್ಯ, ಶಿವಪ್ಪ, ರಾಜಶೇಖರ್ ಮೊದಲಾದವರು ಇದ್ದರು.