ಭಾರತೀಯರ ಸಂಸ್ಕೃತಿ ಬಿಂಬಿಸುವ ರಾಮಾಯಣ: ದೇವೇಂದ್ರಪ್ಪ

| Published : Oct 18 2024, 12:11 AM IST

ಭಾರತೀಯರ ಸಂಸ್ಕೃತಿ ಬಿಂಬಿಸುವ ರಾಮಾಯಣ: ದೇವೇಂದ್ರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ರಾಮಾಯಣವು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಈ ಮಹಾಕಾವ್ಯ ಬರೆದ ಶ್ರೀ ಮಹರ್ಷಿ ವಾಲ್ಮೀಕಿ ಭಾರತ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಮೌಲ್ಯ, ಆದರ್ಶ, ಗುಣಗಳನ್ನು ಪ್ರತಿಯೊಬ್ಬ ನಾಗರೀಕರು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.

- ಜಗಳೂರಲ್ಲಿ ವಾಲ್ಮೀಕಿ ಜಯಂತಿ, ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಕಟ್ಟಡ ಉದ್ಘಾಟನೆ - - - ಕನ್ನಡಪ್ರಭ ವಾರ್ತೆ ಜಗಳೂರು

ರಾಮಾಯಣವು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಈ ಮಹಾಕಾವ್ಯ ಬರೆದ ಶ್ರೀ ಮಹರ್ಷಿ ವಾಲ್ಮೀಕಿ ಭಾರತ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಮೌಲ್ಯ, ಆದರ್ಶ, ಗುಣಗಳನ್ನು ಪ್ರತಿಯೊಬ್ಬ ನಾಗರೀಕರು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಹೇಳಿದರು.

ಪಟ್ಟಣದ ನೂತನ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಗಳೂರು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಭವನ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಜಗಳೂರು ಪಟ್ಟಣ ಅಭಿವೃದ್ಧಿಗೆ ಸುಮಾರು ₹೮ ಕೋಟಿ ಅನುದಾನ ತರಲಾಗಿದೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯ ೧೮ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದೆ. ಪಟ್ಟಣ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂದರು.

ಸಮುದಾಯ ಭವನಕ್ಕೆ ₹3.70 ಕೋಟಿ:

ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ನನ್ನ ಅಧಿಕಾರ ಅವಧಿಯಲ್ಲಿ ₹3.70 ಕೋಟಿ ಅನುದಾನದಲ್ಲಿ ಶ್ರೀ ಮಹರ್ಷಿ ವಾಲ್ಮಿಕಿ ಸಮುದಾಯ ಭವನ ನಿರ್ಮಿಸಲಾಗಿದೆ. ಉದ್ಘಾಟನೆ ಭಾಗ್ಯ ಹಾಲಿ ಶಾಸಕರಿಗೆ ಸಿಕ್ಕಿದೆ. ಆದರೂ, ನಮ್ಮನ್ನು ಕಾರ್ಯಕ್ರಮಕ್ಕೆ ಕರೆಸಿ ಉದ್ಘಾಟಿಸಿರುವುದು ಸಂತಸ ತಂದಿದೆ. ಇದಲ್ಲದೇ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಹಾಲಿ ಶಾಸಕರು ಕ್ಷೇತ್ರ ಅಭಿವೃದ್ಧಿಗೆ ಆದ್ಯತೆ ನೀಡಲಿದ್ದಾರೆ ಎಂದರು.

ಪರಿಶಿಷ್ಟ ಪಂಗಡದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ, ಸರ್ಕಾರ ವಾಲ್ಮೀಕಿ ಜಯಂತಿ ಆಚರಣೆಗೆ ವಿಶೇಷ ಆದ್ಯತೆ ನೀಡಿ, ರಜೆಯನ್ನೂ ಘೋಷಣೆ ಮಾಡಿದೆ. ಕೆರೆ ನಿರ್ಮಿಸಿದ ಮಟ್ಟಿ ತಿಮ್ಮಣ್ಣ ನಾಯಕ, ಇಮಾಂ ಸಾಹೇಬರ ಪುತ್ಥಳಿಗಳನ್ನು ನಿರ್ಮಿಸಿ ಅವರಿಗೆ ಗೌರವಿಸಬೇಕಿದೆ. ಶಾಸಕರು ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.

ತಹಸೀಲ್ದಾರ್ ಸೈಯಿದ್ ಕಲೀಂ ಉಲ್ಲಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್ ಜಿ.ಎ. ಪ್ರಾಸ್ತಾವಿಕ ಭಾಷಣ ಮಾಡಿದರು. ನಿವೃತ್ತ ಸಮಾಜ ಕಲ್ಯಾಣಾಧಿಕಾರಿ ಸಿ.ತಿಪ್ಪೇಸ್ವಾಮಿ ಅವರು ಮಹರ್ಷಿ ವಾಲ್ಮೀಕಿ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ನಾಯಕ ಸಮಾಜದ ಅಧ್ಯಕ್ಷ ಬಡಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೆ.ಎಸ್.ನವೀನ್ ಕುಮಾರ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷೆ ವೀಣಾ ಗೋಗುದ್ದು ರಾಜು, ಬಿ.ಕೆ.ರಮೇಶ್, ಆರ್.ತಿಪ್ಪೇಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಟಿ.ಬಸವರಾಜ್, ಕಸಾಪ ಅಧ್ಯಕ್ಷೆ ಸುಜಾತಮ್ಮ ಸಮಾರಂಭದಲ್ಲಿ ಮಾತನಾಡಿದರು.

ಕಾಂಗ್ರೆಸ್ ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್, ತಾಪಂ ಇಒ ಎನ್.ಕೆ. ಕೆಂಚಪ್ಪ, ಪಪಂ ಮುಖ್ಯಾಧಿಕಾರಿ ಸಿ.ಲೋಕ್ಯಾ ನಾಯ್ಕ್ , ಉಪಾಧ್ಯಕ್ಷೆ ಜಿ.ಬಿ.ಲೋಕಮ್ಮ ಓಬಳೇಶ್, ಪಪಂ ಸದಸ್ಯರಾದ ಟಿ.ಲಲಿತಮ್ಮ, ಷಕೀಲ್ ಅಹಮ್ಮದ್, ಬಿ.ಸರೋಜಮ್ಮ, ನಜಿರ್ ಉನ್ನಿಸಾ, ಎನ್.ಮಹಮ್ಮದ್ ಅಲಿ, ಜೆ.ಪಾಪಲಿಂಗಪ್ಪ, ಕುರುಬ ಸಮಾಜದ ಅಧ್ಯಕ್ಷ ಓಮಣ್ಣ, ಬಿ.ಮಹೇಶ್ವರಪ್ಪ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಜಿ.ಎ. ಮಂಜುನಾಥ್, ವಿವಿಧ ರಾಜಕೀಯ ಮುಖಂಡರು, ನಾಯಕ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು, ಇತರರು ಉಪಸ್ಥಿತರಿದ್ದರು.

- - - -17ಜೆ.ಜಿ.ಎಲ್.17:

ಜಗಳೂರು ಪಟ್ಟಣದ ನೂತನ ಶ್ರೀ ಮಹರ್ಷಿ ವಾಲ್ಮಿಕಿ ಭವನದಲ್ಲಿ ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಅವರನ್ನು ಸನ್ಮಾನಿಸಲಾಯಿತು.