ರಾಮಾಯಣವು ಮೌಲ್ಯಯುತ ಸಾಹಿತ್ಯ ಸೃಷ್ಟಿಗೆ ಪ್ರೇರಣೆ-ಹಿರೇಗೌಡರ

| Published : Oct 19 2024, 12:28 AM IST

ಸಾರಾಂಶ

ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ನಿಮ್ಮೆಲ್ಲರ ಸುದೈವವಾಗಿದೆ ಎಂದು ಸಾರ್ವಜನಿಕ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ವಾಯ್. ಹಿರೇಗೌಡರ ಹೇಳಿದರು.

ಸವಣೂರು: ಭಾರತದ ಮೊಟ್ಟ ಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ನಿಮ್ಮೆಲ್ಲರ ಸುದೈವವಾಗಿದೆ ಎಂದು ಸಾರ್ವಜನಿಕ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಎಸ್.ವಾಯ್. ಹಿರೇಗೌಡರ ಹೇಳಿದರು.ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಸಂಸ್ಕೃತದಲ್ಲಿ ರಚಿಸಲಾಗಿರುವ ರಾಮಾಯಣ ಮಹಾಕಾವ್ಯವು ೨೪,೦೦೦ ಶ್ಲೋಕಗಳನ್ನು ಹೊಂದಿದೆ. ವಾಲ್ಮೀಕಿ ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ಇಂದಿಗೂ ಸಹ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಶುಶ್ರೂಷಾಧಿಕಾರಿಗಳಾದ ಪ್ರಕಾಶ ಲಿಗಾಡಿ, ಅನಿತಾ ಬೆಳವಲಕೊಪ್ಪ, ಆಶಾಲತಾ ನರೇಂದ್ರ, ಅರುಣಕುಮಾರ ಗೊಡ್ಡೆಮ್ಮಿ, ನಾಗನಗೌಡ ಪಾಟೀಲ, ಶಿವಕುಮಾರ ಬೊಳ್ಳೊಳ್ಳಿ, ಮಹಾಂತೇಶ ಹೊಳೆಮ್ಮನವರ, ಮಂಜು ಹಡಪದ ಉಪಸ್ಥಿತರಿದ್ದರು.