ರಾಮಾಯಣ ಮಹರ್ಷಿ ವಾಲ್ಮೀಕಿ ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆ

| Published : Oct 18 2024, 12:17 AM IST

ರಾಮಾಯಣ ಮಹರ್ಷಿ ವಾಲ್ಮೀಕಿ ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ತಾಲೂಕಾಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,

ಪ್ರತಿಯೊಬ್ಬರು ಮಹರ್ಷಿ ವಾಲ್ಮೀಕಿ ಅವರ ಚಿಂತನೆ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಮಾತನಾಡಿ, ಸಂತ ಕವಿ ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶ ಹಾಗೂ ಸಂದೇಶ ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಆಗಲು ಸಾಧ್ಯ ಎಂದರು. ಉಡಕೇರಿಯ ಶ್ರೀ ರಾಮಲಿಂಗೇಶ್ವರ ಪ್ರೌಢಶಾಲೆ ಶಿಕ್ಷಕ, ಕವಿ ನಾಗೇಶ ನಾಯಕ ಉಪನ್ಯಾಸ ನೀಡಿದರು.

ಇದೇ ವೇಳೆ ಎಸ್ಸೆಸ್ಸೆಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಮಹರ್ಷಿ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಮುಖ್ಯ ಅತಿಥಿಗಳಾಗಿ ತಹಸೀಲ್ದಾರ ಹನುಮಂತ ಶಿರಹಟ್ಟಿ, ಡಿವೈಎಸ್ಪಿ ರವಿ ನಾಯ್ಕ, ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ಮುಖ್ಯಾಧಿಕಾರಿ ವಿರೇಶ ಹಸಬಿ, ಬಿಇಒ ಎ.ಎನ್. ಪ್ಯಾಟಿ, ತಾಪಂ ಸಹಾಯಕ ನಿರ್ದೇಶಕ ರಘು ಬಿ.ಎನ್., ಮಹಾಂತೇಶ ಕಳ್ಳಿಬಡ್ಡಿ ಆಗಮಿಸಿದ್ದರು.

ಮಹರ್ಷಿ ವಾಲ್ಮೀಕಿ ಸಮಾಜದ ಮುಖಂಡರಾದ ಆನಂದ ಪಟಾತ, ಸಂಜು ಪದ್ಮನ್ನವರ ಹಾಗೂ ಪುರಸಭೆ ಸದಸ್ಯರು, ಎಲ್ಲ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶ್ರೀ ಮಹರ್ಷಿ ವಾಲ್ಮೀಕಿ ಜೀರ್ನೋದ್ಧಾರ ದೇವಸ್ಥಾನ ಸೇವಾ ಕಮಿಟಿ ಸದಸ್ಯರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಪುರಸಭೆ ಸದಸ್ಯರು, ಶ್ರೀ ಮಹರ್ಷಿ ವಾಲ್ಮೀಕಿ ಸಮಾಜ ಬಾಂಧವರು, ಸಾರ್ವಜನಿಕರು ಇದ್ದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಸ್. ಉಳ್ಳಾಗಡ್ಡಿ ಸ್ವಾಗತಿಸಿದರು. ಮಂಜುನಾಥ ಮಕ್ಕರವಳ್ಳಿ ನಿರೂಪಿಸಿ, ವಂದಿಸಿದರು.

ಭವ್ಯ ಮೆರವಣಿಗೆ:

ಇದಕ್ಕೂ ಮೊದಲು ಪಟ್ಟಣದ ಪುರಸಭೆ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಗೆ ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ಮುಖ್ಯಾಧಿಕಾರಿ ವಿರೇಶ ಹಸಬಿ, ಸದಸ್ಯರು ಚಾಲನೆ ನೀಡಿದರು. ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ತಾಲೂಕು ಪಂಚಾಯಿತಿ ಸಭಾಭವನ ತಲುಪಿತು. ಸಕಲ ವಾದ್ಯಮೇಳ ಮೆರವಣಿಗೆಯ ಕಳೆ ಹೆಚ್ಚಿಸಿತು.