ಸಾರಾಂಶ
ವಿಜಯಪುರ: ವಾಲ್ಮೀಕಿ ರಾಮಾಯಣದ ಆದರ್ಶಗಳನ್ನು ಪ್ರಚಾರ ಮಾಡುವ ಮೂಲಕ ಶಾಂತಿ ಸಹಬಾಳ್ವೆ ನಡೆಸಿದಾಗ ಮಾತ್ರ ವಾಲ್ಮೀಕಿ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಶ್ರೀ ರಾಮ್ ಹೇಳಿದರು.
ವಿಜಯಪುರ: ವಾಲ್ಮೀಕಿ ರಾಮಾಯಣದ ಆದರ್ಶಗಳನ್ನು ಪ್ರಚಾರ ಮಾಡುವ ಮೂಲಕ ಶಾಂತಿ ಸಹಬಾಳ್ವೆ ನಡೆಸಿದಾಗ ಮಾತ್ರ ವಾಲ್ಮೀಕಿ ಜಯಂತಿ ಆಚರಣೆ ಸಾರ್ಥಕವಾಗುತ್ತದೆ ಎಂದು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಶ್ರೀ ರಾಮ್ ಹೇಳಿದರು. ಪಟ್ಟಣದ ವಾಲ್ಮೀಕಿ ಉದ್ಯಾನವನದಲ್ಲಿ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.ವಾಲ್ಮೀಕಿ ರಾಮಾಯಣ ಇಂದಿಗೂ ಪ್ರಸ್ತುತವಾಗಿದ್ದು, ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ ಎಂದರು. ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ರಾಮು ಮಾತನಾಡಿ, ವಾಲ್ಮೀಕಿ ರಾಮಾಯಣ ಭಾರತೀಯರ ಜೀವನಚರಿತ್ರೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಭಾರತದ ಮೊಟ್ಟಮೊದಲ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮೀಕಿಯು ರಾಮಾಯಣದಲ್ಲಿ ಭರತ ಖಂಡದಲ್ಲಿನ ಅರಣ್ಯ, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯ ವರ್ಣಿಸಿದ್ದಾರೆ ಎಂದರು.
ಗೌರವ ಅಧ್ಯಕ್ಷ ಪಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಖಜಾಂಚಿ ಎಂ.ಮುನಿರಾಜ್, ಸಂಘಟನಾ ಕಾರ್ಯದರ್ಶಿ ಪಾಂಡುರಂಗ ಮುಖಂಡರಾದ ರವೀಶ್, ರಮೇಶ್, ಮುನಿರಾಜ್, ಕೃಷ್ಣನಾಯಕ್, ನಾರಾಯಣಸ್ವಾಮಿ, ಮುಕುಂದ, ಚಂದ್ರಶೇಖರ್, ಮುರುಳಿ, ವಿಜಯ್ ಕುಮಾರ್ ಸೇರಿದಂತೆ ಪುರಸಭೆ ಆಡಳಿತ ವರ್ಗ ಮತ್ತು ಸಿಬ್ಬಂದಿವರ್ಗ, ವಾಲ್ಕೀಕಿ ಸಮಾಜದ ಮುಖಂಡರು ಇದ್ದರು.(ಫೋಟೊ ಕ್ಯಾಫ್ಷನ್)
ವಿಜಯಪುರದ ವಾಲ್ಮೀಕಿ ಉದ್ಯಾನವನದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪುತ್ಥಳಿಗೆ ಸಂಘದ ಅಧ್ಯಕ್ಷ ಶ್ರೀ ರಾಮ, ಗೌರವ ಅಧ್ಯಕ್ಷ ಪಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಖಜಾಂಚಿ ಎಂ.ಮುನಿರಾಜ್, ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು.