ಸಾರಾಂಶ
ಕಾರ್ಕಳ ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಖ್ಯಾತ ವಿದ್ವಾಂಸ, ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಉಪನ್ಯಾಸ ನೀಡಿದರು.
ಕನ್ನಡಪ್ರಭ ವಾರ್ತೆ ಕಾರ್ಕಳ
ರಾಮಾಯಣವು ಭಾರತೀಯ ಸಂಸ್ಕೃತಿಯ ಆಗರ ಎಂದು ಖ್ಯಾತ ವಿದ್ವಾಂಸ, ವಾಗ್ಮಿ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಹೇಳಿದರು.ಅವರು ಕಾರ್ಕಳ ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಸಹಭಾಗಿತ್ವದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್‌ನ ಸಂಭ್ರಮ ಸಭಾಂಗಣದಲ್ಲಿ ಉಪನ್ಯಾಸ ನೀಡಿದರು.
ಈ ಕಾವ್ಯವು ಒಂದು ಕಾಲಕ್ಕೆ ಸೀಮಿತಗೊಳ್ಳದೆ ಈ ಜಗತ್ತಿನಲ್ಲಿ ನದಿ, ಪರ್ವತಗಳಲ್ಲದೆ ಸೂರ್ಯ ಚಂದ್ರರ ಬೆಳಕಿರುವ ತನಕ ಜನರ ಬಾಯಿಯಲ್ಲಿ ಇದು ಶಾಶ್ವತವಾಗಿ ನೆಲೆ ನಿಲ್ಲುತ್ತದೆ ಎಂದು ಬ್ರಹ್ಮ ದೇವರು ವಾಲ್ಮೀಕಿ ಮಹರ್ಷಿಗಳಿಗೆ ನೀಡಿದ ಅನುಗ್ರಹದಂತೆ ರಾಮಾಯಣವು ಸಂಸ್ಕೃತಿಯ ನಿಧಿಯಾಗಿ ನಮ್ಮೊಂದಿಗೆ ಇದೆ ಎಂದರು.ಡಾ.ನಾ.ಮೊಗಸಾಲೆ ಸಭಾಧ್ಯಕ್ಷತೆಯನ್ನು ವಹಿಸಿದ್ದು, ಎಸ್. ನಿತ್ಯಾನಂದ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಪ್ರಾಂಜಲಿ ಪ್ರಾರ್ಥಿಸಿದರು. ಸುಧಾಕರ ಶ್ಯಾನುಭಾಗ್ ಅತಿಥಿಗಳನ್ನು ಪರಿಚಯಿಸಿದರು. ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿದರು. ಡಾ.ಸುಮತಿ ಪಿ. ವಂದಿಸಿದರು.