ಸಾರಾಂಶ
ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ರಂಭಾಪುರಿ ವೀರಸಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರವರ ಅಡ್ಡಪಲ್ಲಕ್ಕಿ ಉತ್ಸವ ಸಕಲ ಬಿರುದಾವಳಿಗಳಿಂದ ಜನಸ್ತೋಮದಲ್ಲಿ ವಿಜೃಂಭಣೆಯಿಂದ ನಡೆಯಿತು.
- ದೊಡ್ಡೆತ್ತಿನಹಳ್ಳಿಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ಭಜನೆ
- - -ನ್ಯಾಮತಿ: ತಾಲೂಕಿನ ದೊಡ್ಡೆತ್ತಿನಹಳ್ಳಿ ಗ್ರಾಮದಲ್ಲಿ ಗುರುವಾರ ಸಂಜೆ ರಂಭಾಪುರಿ ವೀರಸಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರವರ ಅಡ್ಡಪಲ್ಲಕ್ಕಿ ಉತ್ಸವ ಸಕಲ ಬಿರುದಾವಳಿಗಳಿಂದ ಜನಸ್ತೋಮದಲ್ಲಿ ವಿಜೃಂಭಣೆಯಿಂದ ನಡೆಯಿತು.
ತಾಲೂಕಿನ ದೊಡ್ಡೆತ್ತಿನಹಳ್ಳಿಯಲ್ಲಿ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಉಡಚಲಮ್ಮ, ಶ್ರೀ ಮಾತಂಗ್ಯಮ್ಮ, ಶ್ರೀ ಗುಳ್ಳಮ್ಮ ದೇವರುಗಳ ದೇಗುಲ ಮಹಾದ್ವಾರ ಪ್ರವೇಶ, ಪ್ರಾಣ ಪ್ರತಿಷ್ಠಾಪನೆ ಮತ್ತು ಶ್ರೀ ಚೌಡಮ್ಮದೇವಿ ದೇಗುಲದ ಕಳಸಾರೋಹಣ ಕಾರ್ಯಕ್ರಮ ಅಂಗವಾಗಿ ಗುರುವಾರ ಸಂಜೆ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು.ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವವು ದೊಡ್ಡೆತ್ತಿನಹಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಗಾಸೆ, ಡೊಳ್ಳು, ಕುಣಿತ, ಭಜನೆ ಸೇರಿದಂತೆ ವಿವಿಧ ಮಂಗಳವಾದ್ಯಗಳೊಂದಿಗೆ ನಡೆದು ಮೆರವಣಿಗೆ ಉದ್ದಕ್ಕೂ ಜಗದ್ಗುರು ಪಂಚಾಚಾರ್ಯ ಮಹಾರಾಜ ಕೀ ಜೈ ಎಂದು ಭಕ್ತರು ಘೋಷಣೆಗಳನ್ನು ಮೊಳಗಿಸಿದರು.
ಉತ್ಸವದಲ್ಲಿ ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ರಾಂಪುರ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಠದ ಶಿವಕುಮಾರ ಸ್ವಾಮೀಜಿ, ಹೊಟ್ಯಾಪುರ ಹಿರೇಮಠದ ಓಂಕಾರ ಸ್ವಾಮೀಜಿ ಮರಿದೇವರು, ನ್ಯಾಮತಿ ಕೋಹಳ್ಳಿ ಹಿರೇಮಠದ ಎನ್.ಕೆ.ವಿಶ್ವಾರಾಧ್ಯ ಶಾಸ್ತ್ರಿ, ಗ್ರಾಮದ ಪ್ರಮುಖರು ಭಾಗವಹಿಸಿದ್ದರು.- - -
(-ಫೋಟೋ)