ಎಸ್.ಎಂ.ಕೃಷ್ಣ ನಿಧನಕ್ಕೆ ರಂಭಾಪುರಿ ಶ್ರೀ ಸಂತಾಪ

| Published : Dec 11 2024, 12:45 AM IST

ಸಾರಾಂಶ

ಬಾಳೆಹೊನ್ನೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಳೆಹೊನ್ನೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ರಾಜ್ಯದ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದ ಕೃಷ್ಣ ಅವರು ರಾಜಕೀಯ ಮುತ್ಸದ್ಧಿಯಾಗಿದ್ದರು. ಪದ್ಮಭೂಷಣ ಪ್ರಶಸ್ತಿ ಪಡೆದಿದ್ದ ಅವರು, ರಾಜ್ಯದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದನ್ನು ಮರೆಯಲಾಗದು. ಜಗದ್ಗುರು ರಂಭಾಪುರಿ ಪೀಠದಲ್ಲಿ ನಡೆದಿದ್ದ ಗುರು-ವಿರಕ್ತರ ಸಮಾವೇಶಕ್ಕೆ ಕೃಷ್ಣ ಅವರು ಆಗಮಿಸಿ ಸಮಾರಂಭ ಉದ್ಘಾಟಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ರಾಜ್ಯದ ವಿವಿಧೆಡೆ ನಡೆದ ರಂಭಾಪುರಿ ಪೀಠದ ಹಲವಾರು ಸಮಾರಂಭ ಗಳಲ್ಲಿಯೂ ಅವರು ಭಾಗವಹಿಸಿದ್ದರು. ಸರಳತೆ, ಸೌಜನ್ಯದ ನಡವಳಿಕೆ ಹೊಂದಿದ್ದ ಅವರ ಅಗಲಿಕೆ ತೀವ್ರ ನೋವು ತಂದಿದೆ. ರಾಜಕೀಯ ಕ್ಷೇತ್ರಕ್ಕೆ ಅವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.೧೦ಬಿಹೆಚ್‌ಆರ್ ೨: ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸುತ್ತಿರುವುದು.