ಸಾರಾಂಶ
ಬಾಳೆಹೊನ್ನೂರು, ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವ ಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸೆ. 22ರಿಂದ ಅ.2ರವರೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.
ಸೆ.22ರಿಂದ ಅ.2ರವರೆಗೆ ಸಮಾರಂಭ । ಮಾಜಿ ಸಿಎಂ ಬಿಎಸ್‌ವೈ ಉದ್ಘಾಟನೆಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವ ಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸೆ. 22ರಿಂದ ಅ.2ರವರೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ. ಸೆ.22ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಾರಂಭ ಉದ್ಘಾಟಿಸಲಿದ್ದು, ಸಚಿವರಾದ ಈಶ್ವರ ಖಂಡ್ರೆ ರಹೀಮ್ ಖಾನ್ ಭಾಗವಹಿಸಲಿದ್ದಾರೆ. ದಸರಾದ ಸಮಿತಿ ಗೌರವಾಧ್ಯಕ್ಷ ಹಾರಕೂಡ ಸಂಸ್ಥಾನ ಹಿರೇಮಠದ ಡಾ. ಚನ್ನವೀರ ಶಿವಾಚಾರ್ಯರು ನೇತೃತ್ವ ವಹಿಸಲಿದ್ದು ಅ.ಭಾ.ವೀ.ಶಿವಾಚಾರ್ಯ ಸಂಸ್ಥೆ ಅಧ್ಯಕ್ಷ ಸಿಂದಗಿಯ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಸಮ್ಮುಖ ವಹಿಸುವರು. ಸೆ.23ರಂದು ಸಚಿವ ಪ್ರಿಯಾಂಕ ಖರ್ಗೆ, ಸಂಸದ ಸಾಗರ ಖಂಡ್ರೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. 24ರಂದು ನಡೆಯುವ ಸಮಾರಂಭದಲ್ಲಿ ಕೊಲ್ಲಿಪಾಕಿ ಕ್ಷೇತ್ರ ದರ್ಶನ ಕೃತಿಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿಡುಗಡೆ ಗೊಳಿಸುವರು. 25ರಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಅಭಿಮನ್ಯು ಪವಾರ, ವಿಪ ಸದಸ್ಯ ಭೀಮರಾವ್ ಪಾಟೀಲ ಭಾಗವಹಿಸಲಿದ್ದಾರೆ. 26ರಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ವಿಜಯಾನಂದ ಕಾಶಪ್ಪನವರ, ಬಿ.ಆರ್.ಪಾಟೀಲ, ಜಿ.ಎಸ್.ಪಾಟೀಲ, ಸಿ.ಸಿ.ಪಾಟೀಲ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಸೆ.27ರಂದು ರಂಭಾಪುರಿ ಬೆಳಗು ಪತ್ರಿಕೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಡುಗಡೆ ಮಾಡುವರು. ಸಂಸದ ಜಗದೀಶ ಶೆಟ್ಟರ್, ಅ.ಭಾ.ವೀ.ಲಿಂ.ಮಹಾಸಭಾ ಅಧ್ಯಕ್ಷ ಶಂಕರ ಬಿದರಿ, ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪ ಮತ್ತಿತರರು ಭಾಗವಹಿಸಲಿದ್ದಾರೆ. 28ರಂದು ಕೇಂದ್ರ ಸಚಿವ ವಿ.ಸೋಮಣ್ಣ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಸಚಿವ ಡಾ. ಶರಣುಪ್ರಕಾಶ ಪಾಟೀಲ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಂ.ವೈ.ಪಾಟೀಲ, ಸಂಭಾಜಿರಾವ ಪಾಟೀಲ, ಜಗದೀಶ ಗುಡಗುಂಟಿ ಭಾಗವಹಿಸವರು. 29ರಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಲಕ್ಷ್ಮಣ ಸವದಿ, ಹರೀಶ ಪೂಂಜಾ, ರಾಜೇಶ ನಾಯಕ, ಮಾಜಿ ಸಂಸದ ಡಾ.ಉಮೇಶ ಜಾಧವ ಪಾಲ್ಗೊಳ್ಳುವರು. 30ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಸಚಿವ ಮಧು ಬಂಗಾರಪ್ಪ, ಮಾಜಿ ಸಚಿವ ಮುರಗೇಶ ನಿರಾಣಿ, ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಅ. 1ರಂದು ನಡೆಯುವ ಸಮಾರಂಭದಲ್ಲಿ ಕೇಂದ್ರದ ಮಾಜಿ ಸಚಿವ ಶಿವರಾಜ ಪಾಟೀಲ, ಸಚಿವ ಬೋಸರಾಜು, ಶಾಸಕ ಶರಣಗೌಡ ಕಂದಕೂರ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಉಪನ್ಯಾಸ: 10ದಿನಗಳ ಈ ಸಮಾರಂಭದಲ್ಲಿ ಬೆಳಗುಂಪಾ ಅಭಿನವ ಪರ್ವತೇಶ್ವರ ಶಿವಾಚಾರ್ಯರು, ಬಸವನ ಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು, ಎಮ್ಮಿಗನೂರಿನ ವಾಮದೇವ ಮಹಂತ ಶಿವಾಚಾರ್ಯರು, ಅಮ್ಮಿನಭಾವಿ ಅಭಿನವ ಶಾಂತಲಿಂಗ ಶಿವಾಚಾರ್ಯರು, ಡಾ. ಜಯಶ್ರೀ ಮಲ್ಲಿಕಾರ್ಜುನ ಹೊಸಮನಿ, ಚಂದ್ರಶೇಖರ ನಾರಣಾಪುರ, ಡಾ.ಮೀನಾಕ್ಷಿ ಖಂಡಿಮಠ, ಡಾ.ಎ.ಸಿ. ವಾಲಿ, ಡಾ.ಪ್ರೇಮಾ ಸಿದ್ಧರಾಜು, ಮಳಖೇಡದ ಹಜರತ್ ಸೈಯದ್ ಶಹಾ ಮುಸ್ತಫಾ ಖಾದರಿ ಅವರಿಂದ ವಿವಿಧ ವಿಷಯಗಳ ಕುರಿತು ಉಪನ್ಯಾಸ ನಡೆಯಲಿದೆ. ಪ್ರಶಸ್ತಿ: ಪ್ರಸಕ್ತ ಸಾಲಿನ ರಂಭಾಪುರಿ ಯುವಸಿರಿ ಪ್ರಶಸ್ತಿಯನ್ನು ವಿಶ್ವಜಿತ ತಾತೇರಾವ ಢವಳೆ (ಲಾಡವಂತಿ), ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಕಲಬುರ್ಗಿಯ ಅಮರಾವತಿ ಎಸ್.ಹಿರೇಮಠ, ಸಾಧನ ಸಿರಿ ಪ್ರಶಸ್ತಿಯನ್ನು ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಗವಿಮಠ ತ್ರಿಪುರಾಂತಕ, ವೀರಶೈವ ಸಿರಿ ಪ್ರಶಸ್ತಿಯನ್ನು ತ್ರಿಪುರಾಂತಕದ ಶರಣಪ್ಪ ಬಿರಾದಾರ, ಶಿವಾಚಾರ್ಯ ರತ್ನ ಪ್ರಶಸ್ತಿಯನ್ನು ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯರಿಗೆ, ಪಡಸಾವಳಿ ಹಿರೇಮಠದ ಶಂಭುಲಿಂಗ ಶಿವಾಚಾರ್ಯರಿಗೆ ಶಿವಾದ್ವೈತ ತತ್ವ ಪ್ರಬೋಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇಷ್ಟಲಿಂಗ ಮಹಾಪೂಜಾ: ಬಸವಕಲ್ಯಾಣದ ಬಿಕೆಡಿಬಿ ಕಲ್ಯಾಣ ಮಂಟಪದಲ್ಲಿ ಪ್ರತಿ ದಿನ ಬೆಳಿಗ್ಗೆ ಲೋಕ ಕಲ್ಯಾಣಾರ್ಥವಾಗಿ ಶ್ರೀರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನಡೆಸುವರು. ವಿಜಯ ದಶಮಿಯಂದು ಇಷ್ಟಲಿಂಗ ಮಹಾಪೂಜೆಗೆ ಸ್ವತಃ ಶ್ರೀ ರಂಭಾಪುರಿ ಜಗದ್ಗುರು ಅಗ್ರೋದಕ ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು.ಅ.2ರ ವಿಜಯದಶಮಿಯಂದು ಶ್ರೀ ರಂಭಾಪುರಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ, ಅರಿವಿನ ಮನೆ ಆವರಣದಲ್ಲಿ ಶಮೀ ಪೂಜೆ, ನಂತರ ಮಾನವ ಧರ್ಮ ಮಂಟಪಕ್ಕೆ ಆಗಮಿಸಿ ಶಾಂತಿ ಸಂದೇಶ ಅನುಗ್ರಹಿಸುವರು. ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ, ಕಾರ್ಯಾಧ್ಯಕ್ಷರಾಗಿ ಶಾಸಕ ಶರಣು ಸಲಗರ, ಗೌರವ ಉಪಾಧ್ಯಕ್ಷರಾಗಿ ರಾಜಶೇಖರ ಪಾಟೀಲ, ಗೌರವಾಧ್ಯಕ್ಷರಾಗಿ ಹಾರಕೂಡ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿಗಳು, ಮಾರ್ಗದರ್ಶಕರಾಗಿ ಮೆಹಕರ-ತಡೋಳಾ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು, ತ್ರಿಪುರಾಂತಕ ಗವಿಮಠದ ಡಾ.ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಕಾರ್ಯನಿರ್ವಹಿಸಲಿದ್ದಾರೆ.ಸೆ.27ರಂದು ಕೃಷಿ ಇಲಾಖೆ ಸಹಕಾರದೊಂದಿಗೆ ಕೃಷಿ ಮೇಳ ನಡೆಯಲಿದೆ. ಸೆ.22ರಿಂದ ಅ.1ರವರೆಗೆ ಬಸವಕಲ್ಯಾಣದ ಶ್ರೀಮದ್ವೀರಶೈವ ಸದ್ಬೋಧನಾ ಸಂಸ್ಥೆ ಮಹಿಳಾ ಘಟಕದಿಂದ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ೧೬ಬಿಹೆಚ್‌ಆರ್ ೩: ರಂಭಾಪುರಿ ಶ್ರೀ