ರಾಜ್ಯದ ವಿವಿಧೆಡೆ ಫೆಬ್ರವರಿ ತಿಂಗಳಲ್ಲಿ ರಂಭಾಪುರಿ ಶ್ರೀ ಪ್ರವಾಸ

| Published : Jan 29 2025, 01:35 AM IST

ರಾಜ್ಯದ ವಿವಿಧೆಡೆ ಫೆಬ್ರವರಿ ತಿಂಗಳಲ್ಲಿ ರಂಭಾಪುರಿ ಶ್ರೀ ಪ್ರವಾಸ
Share this Article
  • FB
  • TW
  • Linkdin
  • Email

ಸಾರಾಂಶ

rambhapuri shri trip, ರಂಭಾಪುರಿ ಶ್ರೀ, ಪ್ರವಾಸ

ಶ್ರೀಪೀಠದ ಸಿ.ಎಚ್.ಬಾಳನಗೌಡ್ರ ಮಾಹಿತಿ । ವಿವಿಧ ಧಾರ್ಮಿಕ ಸಮಾರಂಭಗಳಿಗೆ ಶ್ರೀಗಳ ಸಾನಿಧ್ಯ

ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು

ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಫೆಬ್ರುವರಿ ತಿಂಗಳಿನಲ್ಲಿ ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ.

ಫೆ.1ರಂದು ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳವರ ಪೀಠಾರೋಹಣದ ೩೪ನೇ ವರ್ಧಂತಿ ಮಹೋತ್ಸವ ಧರ್ಮ ಸಮಾರಂಭ, 2ರಂದು ಕಲಘಟಗಿ ತಾಲೂಕು ಸುರಶೆಟ್ಟಿಕೊಪ್ಪದಲ್ಲಿ ಶ್ರೀ ಜಗದ್ಗುರು ರೇಣುಕ-ಶ್ರೀ ವೀರಭದ್ರಸ್ವಾಮಿ ಮೂರ್ತಿ ಪ್ರತಿಷ್ಠಾಪನಾ ಸಮಾರಂಭ, 3ರಂದು ವಿಜಯಪುರ ಜಿಲ್ಲೆ ಲೋಣಿ(ಬಿ.ಕೆ.) ಗ್ರಾಮದಲ್ಲಿ ಶ್ರೀ ಗುರು ರೇವಣಸಿದ್ಧೇಶ್ವರ ಗೋಪುರ ಕಳಸಾರೋಹಣ ಸಮಾರಂಭ, 5ರಂದು ಮಹಾರಾಷ್ಟ್ರ ರಾಜ್ಯದ ಅಕ್ಕಲಕೋಟ ತಾಲೂಕಿನ ಮೈಸಲಗಿಯಲ್ಲಿ ಧರ್ಮ ಜಾಗೃತಿ ಸಮಾರಂಭ, 6ರಂದು ಅಕ್ಕಲಕೋಟ ತಾಲೂಕಿನ ತಡವಾಳದಲ್ಲಿ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು.

ಫೆ.7ರಂದು ಕಲಬುರಗಿಯಲ್ಲಿ ಶ್ರೀ ಚೌಧಾಪುರಿ ಹಿರೇಮಠದ ನವೀಕೃತ ಕಟ್ಟಡ ಹಾಗೂ ಗದ್ದುಗೆ ಪ್ರತಿಷ್ಠಾಪನಾ ಸಮಾರಂಭ, 8ರಂದು ತಿಪಟೂರು ತಾಲೂಕಿನ ಈಚನೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಉದ್ಘಾಟನಾ ಸಮಾರಂಭ, 10ರಂದು ಬೆಳಿಗ್ಗೆ 10 ಗಂಟೆಗೆ ಭದ್ರಾವತಿ ತಾಲೂಕ ವೈಸನಹಳ್ಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆ-ಧರ್ಮ ಸಮಾರಂಭ, ಮಧ್ಯಾಹ್ನ 12.30ಕ್ಕೆ ಶಿವಮೊಗ್ಗ ಜಿಲ್ಲೆ ಹೊಳೆಹಟ್ಟಿ ಹಳೇ ಗ್ರಾಮದಲ್ಲಿ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸುವರು.

ಫೆ.12ರಂದು ಪೌರ್ಣಿಮೆಯ ಅಂಗವಾಗಿ ಬಾಳೆಹೊನ್ನೂರು ರಂಭಾಪುರಿ ಪೀಠದಲ್ಲಿ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. 15ರಂದು ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ತಿಪ್ಪಾಯಿಕೊಪ್ಪದಲ್ಲಿ ಇಷ್ಟಲಿಂಗ ಮಹಾಪೂಜಾ-ಸಮಾರಂಭ, 16ರಂದು ಸಾಗರದಲ್ಲಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಇಷ್ಟಲಿಂಗ ಮಹಾಪೂಜಾ, 17ರಂದು ಬೇಲೂರು ತಾಲೂಕಿನ ಪಡುವಳಲು ಗ್ರಾಮದಲ್ಲಿ ನೂತನ ದೇವಾಲಯ ಉದ್ಘಾಟನಾ ಸಮಾರಂಭ, 18ರಂದು ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ಲಿಂ.ಶ್ರೀ ಸಂಗಮೇಶ್ವರ ಅಜ್ಜನವರ ಪುಣ್ಯಾರಾಧನೆ ಧರ್ಮ ಸಮಾರಂಭ, 19ರಂದು ಶಹಪುರ ತಾಲೂಕಿನ ದೋರನಹಳ್ಳಿಯಲ್ಲಿ ಶ್ರೀ ಗುರು ಪಟ್ಟಾಧಿಕಾರ ಸಮಾರಂಭ, 21ರಂದು ಸವಣೂರಿನಲ್ಲಿ ನೂತನ ಗೃಹ ಪ್ರವೇಶ ಸಮಾರಂಭದಲ್ಲಿ ಪಾಲ್ಗೊಳ್ಳುವರು.

22ರಂದು ಲಕ್ಷ್ಮೇಶ್ವರ ತಾಲೂಕಿನ ಆಡರಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ಸಮಾರಂಭ, 23ರಂದು ಹರಿಹರ ತಾಲೂಕಿನ ಗುತ್ತೂರಿನಲ್ಲಿ ಇಷ್ಟಲಿಂಗ ಮಹಾಪೂಜಾ ಧರ್ಮ ಸಮಾರಂಭ, ೨೪ರಂದು ಹೊಳೆನರಸೀಪುರ ತಾಲೂಕಿನ ನಿಡುವಣಿ ಗ್ರಾಮದಲ್ಲಿ ದೇವಾಲಯ ಉದ್ಘಾಟನೆ-ಧರ್ಮ ಸಮಾರಂಭ, 26ರಂದು ವಿಜಯಪುರ ಜಿಲ್ಲೆ ನಾಗಠಾಣದಲ್ಲಿ ಶ್ರೀ ಉದಯಲಿಂಗೇಶ್ವರ ದೇವಸ್ಥಾನ ಉದ್ಘಾಟನಾ ಸಮಾರಂಭ, 27ರಂದು ನರಗುಂದ ಪಂಚಗೃಹ ಹಿರೇಮಠದಲ್ಲಿ ಧರ್ಮ ಜಾಗೃತಿ ಸಮಾರಂಭ, 28ರಂದು ಲಕ್ಷ್ಮೇಶ್ವರ ತಾಲೂಕಿನ ಮುಕ್ತಿಮಂದಿರ ಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.