ಸಾರಾಂಶ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಅಜ್ಜರಕಾಡು ಪುರಭವನದಲ್ಲಿ ಹಮ್ಮಿಕೊಳ್ಳಲಾಯಿತು.ಶಿಬಿರವನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಇತ್ತೀಚೆಗೆ ನೂತನವಾಗಿ ನೇಮಕಗೊಂಡ ವಿಧಾನಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ, ಮಂಗಳೂರು ವಿದ್ಯುತ್ ಶಕ್ತಿ ಸರಬರಾಜು ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ. ಎ. ಗಫೂರ್, ಗೇರು ಬೀಜ ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಬೀಜ ಮತ್ತು ಸಾವಯವ ಪ್ರಾಮಾಣಿಕರಣ ಸಂಸ್ಥೆಯ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೊ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ದಾಸ್, ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಹಾಗೂ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.ರಮೇಶ್ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತ ಪಿ ಶೆಟ್ಟಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ ಮತ್ತಿತರರಿದ್ದರು.
;Resize=(128,128))
;Resize=(128,128))
;Resize=(128,128))