ಸಾರಾಂಶ
ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ರಾಜ್ಯದ ಸಮಸ್ತ ಬೇಡ ವಾಲ್ಮೀಕಿ ಸಮಾಜದ ಬಗ್ಗೆ ತುಂಬಾ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಈ ಹೇಳಿಕೆ ತೀವ್ರವಾಗಿ ಖಂಡಿಸುತ್ತೇವೆ ಎಂದು ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.
- ರಾಜ್ಯ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ - - -
ದಾವಣಗೆರೆ: ಬೆಳಗಾವಿಯಲ್ಲಿ ಮಾಜಿ ಸಂಸದ ರಮೇಶ ಕತ್ತಿ ರಾಜ್ಯದ ಸಮಸ್ತ ಬೇಡ ವಾಲ್ಮೀಕಿ ಸಮಾಜದ ಬಗ್ಗೆ ತುಂಬಾ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ. ಈ ಹೇಳಿಕೆ ತೀವ್ರವಾಗಿ ಖಂಡಿಸುತ್ತೇವೆ ಎಂದು ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.ಮಾಜಿ ಸಂಸದ ರಮೇಶ ಕತ್ತಿ ರಾಜ್ಯದ ಬೇಡ ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ಅಕ್ಷಮ್ಯ. ರಮೇಶ ಕತ್ತಿ ಹೇಳಿಕೆ ನಮಗೆ ಹಾಗೂ ನಮ್ಮ ಸಮುದಾಯಕ್ಕೂ ತೀವ್ರ ನೋವನ್ನುಂಟು ಮಾಡಿದೆ ಎಂದು ಅವರು ವೀಡಿಯೋ ಸಂದೇಶದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾತಿಯ ಕಾರಣಕ್ಕಾಗಿ ಸಮುದಾಯದ ಮುಖ್ಯ ವಾಹಿನಿಯಿಂದ ದೂರ ಉಳಿದಿದ್ದ ಇಂತಹ ಸಮುದಾಯಗಳಿಗೆ ಕಾನೂನಿನಾತ್ಮಕವಾಗಿ ರಕ್ಷಣೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಇಂತಹ ಮನಸ್ಥಿತಿಯ ಕೆಲವರು ಸಮುದಾಯಗಳ ಮಧ್ಯೆ ಹೀಗೆ ಮಾತನಾಡುತ್ತಿರುವುದು ತುಂಬಾ ನೋವಿನ ಸಂಗತಿ ಎಂದು ಆಕ್ಷೇಪಿಸಿದ್ದಾರೆ.ರಮೇಶ ಕತ್ತಿ ಹೇಳಿಕೆ ಇಡೀ ಬೇಡ ವಾಲ್ಮೀಕಿ ಸಮುದಾಯ ಹಾಗೂ ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯಗಳು ತೀವ್ರವಾಗಿ ಖಂಡಿಸುತ್ತವೆ. ಅವರ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಒತ್ತಾಯಿಸಿದ್ದಾರೆ.
- - --20ಕೆಡಿವಿಜಿ1, 2: ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ.