ಸಾರಾಂಶ
ಗುಳೇದಗುಡ್ಡ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ ಸೋಮವಾರ ಪಟ್ಟಣದಲ್ಲಿ ರಾಮೋತ್ಸವ ನಿಮಿತ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭಿಷೇಕ, ಅನ್ನಸಂತರ್ಪಣೆ ನಡೆಸಲಾಯಿತು. ಪಟ್ಟಣದ ಬೀದಿಗಳಲ್ಲಿ ಕೇಸರಿ ಧ್ವಜಗಳನ್ನು ಹಾರಿಸಲಾಯಿತು. ಪಟ್ಟಣದ ಲಕ್ಷ್ಮೀ ಸಹಕಾರಿ ಬ್ಯಾಂಕಿನಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಂಕಿನಲ್ಲಿ ಮುಂಭಾಗದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣದ ಕರಸೇವೆಕ ದೇವೇಂದ್ರಪ್ಪ ತಿಪ್ಪಣ್ಣ ಗಾಯದ ಅವರನ್ನು ಸನ್ಮಾನಿಸಲಾಯಿತು. ಬಳಕ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು.
ಕನ್ನಡಪ್ರಭವಾರ್ತೆ ಗುಳೇದಗುಡ್ಡ
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಂಭ್ರಮ ಸೋಮವಾರ ಪಟ್ಟಣದಲ್ಲಿ ರಾಮೋತ್ಸವ ನಿಮಿತ್ತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭಿಷೇಕ, ಅನ್ನಸಂತರ್ಪಣೆ ನಡೆಸಲಾಯಿತು. ಪಟ್ಟಣದ ಬೀದಿಗಳಲ್ಲಿ ಕೇಸರಿ ಧ್ವಜಗಳನ್ನು ಹಾರಿಸಲಾಯಿತು.ಪಟ್ಟಣದ ಲಕ್ಷ್ಮೀ ಸಹಕಾರಿ ಬ್ಯಾಂಕಿನಲ್ಲಿ ಸೋಮವಾರ ಬೆಳಿಗ್ಗೆ ಬ್ಯಾಂಕಿನಲ್ಲಿ ಮುಂಭಾಗದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣದ ಕರಸೇವೆಕ ದೇವೇಂದ್ರಪ್ಪ ತಿಪ್ಪಣ್ಣ ಗಾಯದ ಅವರನ್ನು ಸನ್ಮಾನಿಸಲಾಯಿತು. ಬಳಕ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಿತು. ಬ್ಯಾಂಕ್ ಅಧ್ಯಕ್ಷ ರಾಜಶೇಖರ ಶೀಲವಂತ, ಉಪಾಧ್ಯಕ್ಷ ಕಮಲಕಿಶೋರ ಮಾಲಪಾಣಿ, ಗಣೇಶ ಶೀಲವಂತ, ಸಂಜು ಕಾರಕೂನ, ಮುರುಗೇಶ ರಾಜನಾಳ, ಸಂಗಪ್ಪ ಆಲೂರ, ವೀರಣ್ಣ ಕುರಹಟ್ಟಿ, ದೀಪಕ ನೇಮದಿ ಮತ್ತಿತರರು ಇದ್ದರು.
ನಡುವಿನ ಪೇಟೆಯ ವ್ಯಾಪರಸ್ಥರಿಂದ ನಡುವಿನ ಪೇಟೆಯಲ್ಲಿ, ಗಚ್ಚಿನಕಟ್ಟಿ ಬಾಲಾಜಿ ದೇವಸ್ಥಾನದಲ್ಲಿ, ಕಂಠಿಪೇಟೆಯ ಶ್ರೀ ಬನಶಂಕರಿ ದೇವಸ್ಥಾನ, ಕೆಳಗಿನಪೇಟೆಯ ಶ್ರೀ ಸಾಲೇಶ್ವರ ದೇವಸ್ಥಾನ ಸೇರಿದಂತೆ ವಿವಿಧೆಡೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನಸಂರ್ಪಣೆ ನಡೆಸಲಾಯಿತು. ಗಲ್ಲಿಗಲ್ಲಿಗಳಲ್ಲಿ ರಾಮಭಕ್ತರು ರಾಮನ ಭಾವಚಿತ್ರಕ್ಕೆ ಪೂಜೆಸಲ್ಲಿಸಿ, ರಾಮೋತ್ಸವ ಆಚರಿಸಿದರು.