ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಬಿಜೆಪಿ ಧಿಕ್ಕರಿಸಿ

| Published : Apr 12 2024, 01:01 AM IST / Updated: Apr 12 2024, 01:02 AM IST

ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಬಿಜೆಪಿ ಧಿಕ್ಕರಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಬಡವರು, ರೈತರ ವಿರೋಧಿಯಾಗಿರುವ ಬಿಜೆಪಿ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯವರು ಯಾವತ್ತೂ ರೈತರ ಸಾಲ ಮನ್ನಾ ಮಾಡಿಲ್ಲ. ಕೇಂದ್ರದಲ್ಲಿ ಮನಮೋಹನ್‌ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘದಲ್ಲಿರುವ ರೈತರ ಸಾಲ 50 ಸಾವಿರದವರೆಗೆ ಮನ್ನಾ ಮಾಡಿದ್ದರು

- ಮಾಜಿ ಶಾಸಕ ಡಾ. ಯತೀಂದ್ರ ಸಲಹೆಕನ್ನಡಪ್ರಭ ವಾರ್ತೆ ಮೈಸೂರು

ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಬಿಜೆಪಿಯನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದರೊಂದಿಗೆ ಸುನಿಲ್ ಬೋಸ್‌ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ಹಾಗೂ ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

ವರುಣ ಕ್ಷೇತ್ರದ ರಂಗಸಮುದ್ರ ಕುಪ್ಯ, ತುಂಬಲ, ಕೆಂಪಯ್ಯನಹುಂಡಿ, ಬಿಳಿಗೆರೆಹುಂಡಿ ಗ್ರಾಮಗಳಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್‌ ಬೋಸ್ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಸಂವಿಧಾನ ಬದಲಾದರೆ ದೇಶಕ್ಕೆ ದೊಡ್ಡ ಅಪಾಯ ಎದುರಾಗಲಿದ್ದು, ಜನರು ಈಗಲೇ ಎಚ್ಚರದಿಂದ ಮತ ಚಲಾಯಿಸಬೇಕು ಎಂದು ಹೇಳಿದರು.

ಬಡವರು, ರೈತರ ವಿರೋಧಿಯಾಗಿರುವ ಬಿಜೆಪಿ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯವರು ಯಾವತ್ತೂ ರೈತರ ಸಾಲ ಮನ್ನಾ ಮಾಡಿಲ್ಲ. ಕೇಂದ್ರದಲ್ಲಿ ಮನಮೋಹನ್‌ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘದಲ್ಲಿರುವ ರೈತರ ಸಾಲ 50 ಸಾವಿರದವರೆಗೆ ಮನ್ನಾ ಮಾಡಿದ್ದರು ಎಂದರು.

ವಿವಿಧ ನಿಗಮ ಮಂಡಳಿಗಳಲ್ಲಿನ ದಲಿತರು, ಹಿಂದುಳಿದವರು, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರ ಸಾಲ ಮನ್ನಾ ಮಾಡಿದ್ದರು. ಬಡವರ ಭಾಗ್ಯಜ್ಯೋತಿ ಬಿಲ್ಲನ್ನು ಮನ್ನಾ ಮಾಡಿದ್ದರು. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ 1 ಲಕ್ಷ ರು. ಕೊಡಲಾಗುವುದು. ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಅವರು ಹೇಳಿದರು.

ಮುಖಂಡರಾದ ಪ್ರಭಾಕರ್, ಮಹದೇವಣ್ಣ, ತುಂಬಲ ಬಾಬು, ಅನಿಲ್‌ ಕುಮಾರ್, ಭಾಗ್ಯಮ್ಮ, ರಮೇಶ್, ಮುದ್ದೇಗೌಡ, ಮಹಾದೇವ, ರಘು, ಶಿವರಾಂ ಮೊದಲಾದವರು ಇದ್ದರು.