ರಾಜೇಶ್ವರಿ ವಸ್ತ್ರಾಲಂಕಾರ ಸಂಸ್ಥಾಪಕ ಬಿ.ಎಂ. ರಾಮಚಂದ್ರ ಮುಖ್ಯ ಅತಿಥಿಗಳಾಗಿದ್ದರು
ಕನ್ನಡಪ್ರಭ ವಾರ್ತೆ ಮೈಸೂರುನಾಲ್ವಡಿ ಸೋಷಿಯಲ್, ಕಲ್ಚರಲ್ ಆ್ಯಂಡ್ ಎಜುಕೇಷನಲ್ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿರುವ ್ನಿಕೇತನ- ಉಚಿತ ಜಾನಪದ ಮತ್ತು ರಂಗತರಬೇತಿ ಶಿಬಿರವನನ್ನು ರಂಗಾಯಣದ ಬಿ.ವಿ. ಕಾರಂತ ರಂಗಚಾವಡಿಯಲ್ಲಿ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ನಿರ್ದೇಶಕ ಡಾ.ಎಂ.ಡಿ, ಸುದರ್ಶನ್, ರಾಜೇಶ್ವರಿ ವಸ್ತ್ರಾಲಂಕಾರ ಸಂಸ್ಥಾಪಕ ಬಿ.ಎಂ. ರಾಮಚಂದ್ರ ಮುಖ್ಯ ಅತಿಥಿಗಳಾಗಿದ್ದರು. ಗೌತಮ ಟ್ರಸ್ಟ್ ಸಂಸ್ಥಾಪಕ ಕೃಷ್ಣಮೂರ್ತಿ ತಲಕಾಡು ಸ್ವಾಗತಿಸಿದರು. ಟ್ರಸ್ಟ್ ಅಧ್ಯಕ್ಷ ದಿನೇಶ್ ಚಮ್ಮಾಳಿಗೆ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಶ್ವನಾಥ್ ಚಂಗಚಹಳ್ಳಿ ಜಾನಪದ ಗೀತೆ ಹಾಡಿದರು.