ಉಡುಪಿ: ರಂಗಾಯಣದ ‘ಮಾರ್ನೆಮಿ’ ನಾಟಕ ಪ್ರದರ್ಶನ

| Published : Mar 07 2024, 01:53 AM IST

ಸಾರಾಂಶ

ಜಿಲ್ಲಾಧಿಕಾರಿ ಅವರು ಚಂಡೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಕ್ಷರಂಗಾಯಣ ಕಾರ್ಕಳ ವತಿಯಿಂದ ರಂಗಾಯಣ ಶಿವಮೊಗ್ಗ ಇವರು ಪ್ರಸ್ತುತ ಪಡಿಸಿರುವ ಡಾ. ಗೀತಾ ಪಿ. ಸಿದ್ದಿ ಅವರ ಕಥೆ ಆಧಾರಿತ ‘ಮಾರ್ನೆಮಿ’ ನಾಟಕ ಪ್ರದರ್ಶನ ಮಂಗಳವಾರ ನಗರದ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಿತು.ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಚಂಡೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ, ತಲ್ಲೂರು ಫ್ಯಾಮಿಲಿ ಟ್ರಸ್ಟ್‌ ನ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಸಮಾಜಸೇವಕ ವಿಶ್ವನಾಥ ಶೆಣೈ ಹಾಗೂ ನಾಟಕ ನಿರ್ದೇಶಕ ಶ್ರೀಕಾಂತ್ ಕುಮಟಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

|ಕಾರ್ಯಕ್ರಮದಲ್ಲಿ ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ರಾಮಾಂಜಿ ನಿರೂಪಿಸಿ, ವಂದಿಸಿದರು.