ಸಾರಾಂಶ
ಮಾಗಡಿ: ತಾಲೂಕು ಆಡಳಿತ ತಾಲೂಕು ಸ್ವೀಪ್ ಸಮಿತಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಸ್ವಸಹಾಯ ಮಹಿಳಾ ಸಂಘದ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಮಾಗಡಿ: ತಾಲೂಕು ಆಡಳಿತ ತಾಲೂಕು ಸ್ವೀಪ್ ಸಮಿತಿ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಸ್ವಸಹಾಯ ಮಹಿಳಾ ಸಂಘದ ವತಿಯಿಂದ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಏ.26ರಂದು ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡುವಂತೆ ಜನಜಾಗೃತಿ ಮೂಡಿಸಲಾಗುತ್ತಿದೆ. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಮತ್ತು ಮಕ್ಕಳ ಇಲಾಖೆ, ಸ್ವಸಹಾಯ ಮಹಿಳಾ ಸಂಘಗಳಿಂದ ಪಟ್ಟಣದಲ್ಲಿ ಮತದಾನ ಜಾಗೃತಿ ಜಾಥಾ ಹೊರಟು ಪಟ್ಟಣದ ಕಲ್ಯಾಗೇಟ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿ, ಪ್ರತಿಜ್ಞಾವಿಧಿ ಬೋಧಿಸಲಾಯಿತು. ರಂಗೋಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು. ತಾಲೂಕು ಆಡಳಿತ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.