ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಜೊತೆಗೆ ರಂಗೋಲಿ ಸ್ಪರ್ಧೆಗಳ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವುದು ಹಾಗೂ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ವೈಯಕ್ತಿಕವಾಗಿ ಜನರ ಸಮಸ್ಯೆ, ಮಹಿಳೆಯರ ಸಮಸ್ಯೆ, ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸಕ್ಕೆ ಮುಂದಾಗಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು. ಸೋಂಪುರ ಹೋಬಳಿ ಪೆಮ್ಮನಹಳ್ಳಿಯಲ್ಲಿ ನೆಲಮಂಗಲ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಂಗೋಲಿಗೆ ನಮ್ಮ ಹಿಂದೂ ಧರ್ಮದಲ್ಲಿ ಪ್ರಮುಖ ಸ್ಥಾನ ನೀಡಿದ್ದೇವೆ. ಇಂದಿಗೂ ಮಹಿಳೆಯರು ಪ್ರತಿ ಮನೆಯ ಮುಂದೆ ಬೆಳಗ್ಗೆ ರಂಗೋಲಿ ಬಿಡಿಸಿ ಮನೆಯ ಕಾರ್ಯಗಳನ್ನು ಆರಂಭಿಸುವುದು ರೂಢಿಯಲ್ಲಿದೆ ಎಂದರು. ಕಾರ್ಯಕ್ರಮದಲ್ಲಿ ಮುಖಂಡ ಅಗಳಕುಪ್ಪೆ ಗೋವಿಂದರಾಜು, ಎನ್‍ಪಿಎ ಸದಸ್ಯ ಅಂಚೆಮನೆ ಪ್ರಕಾಶ್, ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್, ನಿಡವಂದ ವಿಎಸ್‍ಎಸ್‍ಎನ್ ಅಧ್ಯಕ್ಷ ಕೇಶವಮೂರ್ತಿ, ಮಾಜಿ ಸದಸ್ಯರಾದ ಸಿದ್ದಪ್ಪ, ಸಿದ್ದರಾಜು, ಮುಖಂಡರಾದ ಪೆಮ್ಮನಹಳ್ಳಿ ಮಂಜುನಾಥ್, ಬೋಜರಾಜು, ಮನೋಜ್, ಸೂರ್ಯಕುಮಾರ್, ಶ್ರೀನಿವಾಸ್, ರಾಜು, ಚಿಕ್ಕಣ್ಣ, ಪಾರ್ಥ, ದೇವರಾಜು, ಚಂದ್ರಶೇಖರ್, ಶಿವಸ್ವಾಮಿ, ಸುರೇಶ್ ಇತರರು ಉಪಸ್ಥಿತರಿದ್ದರು.ಪೋಟೋ 7 :
ಸೋಂಪುರ ಹೋಬಳಿಯ ಪೆಮ್ಮನಹಳ್ಳಿಯಲ್ಲಿ ನೆಲಮಂಗಲ ಉತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ರಂಗೋಲಿ ಸ್ಪರ್ಧೆಗೆ ಶಾಸಕ ಶ್ರೀನಿವಾಸ್, ಅಗಳಕುಪ್ಪೆ ಗೋವಿಂದರಾಜು, ಅಂಚೆಮನೆ ಪ್ರಕಾಶ್, ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್, ನಿಡವಂದ ವಿಎಸ್‍ಎಸ್‍ಎನ್ ಅಧ್ಯಕ್ಷ ಕೇಶವಮೂರ್ತಿ ಇತರರು ಚಾಲನೆ ನೀಡಿದರು.ಮಹಿಳೆಯರ ಉತ್ತೇಜಿಸಲು ರಂಗೋಲಿ ಸ್ಪರ್ಧೆ: ಶ್ರೀನಿವಾಸ್
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಜೊತೆಗೆ ರಂಗೋಲಿ ಸ್ಪರ್ಧೆಗಳ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವುದು ಹಾಗೂ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಭೇಟಿ ನೀಡಿ ವೈಯಕ್ತಿಕವಾಗಿ ಜನರ ಸಮಸ್ಯೆ, ಮಹಿಳೆಯರ ಸಮಸ್ಯೆ, ರೈತರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಕೆಲಸಕ್ಕೆ ಮುಂದಾಗಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.