ಸಾರಾಂಶ
ಅಪ್ರಾಪ್ತೆಯನ್ನು ಅಪಹರಿಸಿ, ಅತ್ಯಾಚಾರ ನಡೆಸಿದ್ದ ಪ್ರಕರಣ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದೊಡ್ಡರಹಳ್ಳಿ ಗ್ರಾಮದ ಎ.ಕೆ.ಶಿವು ಅಲಿಯಾಸ್ ಶಿವಕುಮಾರ ಅಪರಾಧಿ.
ದಾವಣಗೆರೆ: ಅಪ್ರಾಪ್ತೆಯನ್ನು ಅಪಹರಿಸಿ, ಅತ್ಯಾಚಾರ ನಡೆಸಿದ್ದ ಪ್ರಕರಣ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹35 ಸಾವಿರ ದಂಡ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ದೊಡ್ಡರಹಳ್ಳಿ ಗ್ರಾಮದ ಎ.ಕೆ.ಶಿವು ಅಲಿಯಾಸ್ ಶಿವಕುಮಾರ ಅಪರಾಧಿ.
ಮಗಳನ್ನು ಮದುವೆ ಆಗುವುದಾಗಿ ನಂಬಿಸಿ, ಅಪಹರಿಸಿದ್ದಾನೆ ಎಂದು ಬಾಲಕಿ ತಂದೆ ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಂದಿನ ಹೊನ್ನಾಳಿ ಠಾಣೆ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ತನಿಖೆ ನಡೆಸಿ, ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ಆಲಿಸಿದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ ಅವರು ಅಪರಾಧಿಗೆ ಶಿಕ್ಷೆ ಪ್ರಕಟಿಸಿದರು. ಸದರಿ ಆರೋಪಿತನಿಂದ ವಸೂಲು ಮಾಡಿದ ದಂಡದ ಒಟ್ಟು ಮೊತ್ತ ₹35,000 ವನ್ನು ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಹಾಗೂ ಸಂತ್ರಸ್ತೆಗೆ ಸರ್ಕಾರದಿಂದ ₹4 ಲಕ್ಷ ಪರಿಹಾರ ನೀಡುವಂತೆ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಪಿರ್ಯಾದಿಯವರ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ನ್ಯಾಯ ಮಂಡನೆ ಮಾಡಿದ್ದರು.
- - - (ಸಾಂದರ್ಭಿಕ ಚಿತ್ರ)